ಉಡುಪಿ: ನಾಳೆ (ಜುಲೈ 5) ಮೂರು ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Share with


ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿದ್ದು, ಹಲವೆಡೆ ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ. ಜಿಲ್ಲೆಯ ಬೈಂದೂರು, ಕುಂದಾಪುರ ಮತ್ತು ಬ್ರಹ್ಮಾವರ ತಾಲೂಕಿನಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗೃತ ಕ್ರಮವಾಗಿ ಬೈಂದೂರು, ಕುಂದಾಪುರ ಮತ್ತು ಬ್ರಹ್ಮಾವರ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ, ಹಾಗೂ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ನಾಳೆ (ಜುಲೈ 5) ರಜೆ ಘೋಷಿಸಿ ಕುಂದಾಪುರ ಉಪ ವಿಭಾಗಾಧಿಕಾರಿ ರಶ್ಮಿ ಎಸ್.ಆರ್. ಆದೇಶ ನೀಡಿದ್ದಾರೆ.
ಭಾರೀ ಗಾಳಿಮಳೆಗೆ ಮೂರು ತಾಲೂಕಿನಾದ್ಯಂತ ಅಪಾರ ಪ್ರಮಾಣದಲ್ಲಿ ಹಾನಿ ಸಂಭವಿಸಿದೆ. ಮಳೆ ಮುಂದುವರಿಯುವ ಸಾಧ್ಯತೆ ಇರುವ ಕಾರಣ ರಜೆ ಘೋಷಿಸಲಾಗಿದೆ. ಉಳಿದಂತೆ ಎಲ್ಲಾ ಪದವಿ, ಸ್ನಾತಕೊತ್ತರ ಪದವಿ. ಡಿಪ್ಲೋಮ, ಇಂಜಿನಿಯರಿಂಗ್, ಐ.ಟಿ.ಐ ಗಳಿಗೆ ರಜೆ ಘೋಷಿಸಿರುವುದಿಲ್ಲ.


Share with

Leave a Reply

Your email address will not be published. Required fields are marked *