ಬಂಟ್ವಾಳ: ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ವ್ಯಕ್ತಿಯೋರ್ವರು ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಉಳ್ಳಾಲ ತಾಲೂಕಿನ ಕುರ್ನಾಡು ಎಂಬಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಕುರ್ನಾಡು ಗ್ರಾಮದ ಹೂವಿನಕೊಪ್ಪಲು ನಿವಾಸಿ ವಿಶ್ವನಾಥ (52) ಎಂಬುವವರು ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದ್ದು, ಅವರು ಚೇಳೂರು ಗ್ರಾಮದ ಬರೆ ಎಂಬಲ್ಲಿ ಮನೆಯೊಂದರ ಕೂಲಿ ಕೆಲಸಕ್ಕೆಂದು ಹೋಗಿದ್ದರು. ಅಲ್ಲಿ ಅಡಿಕೆ ತೋಟಕ್ಕೆ ದನದ ಗೊಬ್ಬರವನ್ನು ಹಾಕುತ್ತಿದ್ದು, ಸಂಜೆ ಸರಿಸುಮಾರು 5 ಗಂಟೆ ವೇಳೆಗೆ ಕೆಲಸ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ನೆಲಕ್ಕೆ ಕುಸಿದು ಬಿದ್ದು ಮೂರ್ಚೆ ಹೋಗಿದ್ದರು. ಕೂಡಲೇ ಮಂಗಳೂರು ಕಣಚ್ಚೂರು ಖಾಸಗಿ ಆಸ್ಪತ್ರೆಗೆ ಕೊಂಡು ಹೋಗಲಾಯಿತಾದರೂ ಅವರು ದಾರಿ ಮಧ್ಯ ಮೃತಪಟ್ಟ ಬಗ್ಗೆ ವೈದ್ಯರು ತಿಳಿಸಿದ್ದಾರೆ. ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.