ಟ್ರಾಫಿಕ್ ನಲ್ಲಿ ಹೂ ಮಾರುತ್ತಿದ್ದ ಪುಟ್ಟ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ..! ಕಾಮುಕನ ಹೆಡೆಮುರಿ ಕಟ್ಟಿದ ಪೊಲೀಸರು

Share with

ನವದೆಹಲಿ: ಹೊಟ್ಟೆಪಾಡಿಗಾಗಿ ಟ್ರಾಫಿಕ್ ಸಿಗ್ನಲ್‌ನಲ್ಲಿ ಹೂವು ಮಾರುತ್ತಿದ್ದ  ಪುಟ್ಟ ಬಾಲಕಿಯನ್ನು  ಕಾಮುಕನೋರ್ವ ಅಪಹರಿಸಿ ಅತ್ಯಾಚಾರವೆಸಗಿರುವ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದಿದೆ.  ಜನವರಿ 11ರಂದು ಕೇಂದ್ರ ದೆಹಲಿಯ ಟ್ರಾಫಿಕ್ ಸಿಗ್ನಲ್‌ಗಳಲ್ಲಿ ಗುಲಾಬಿ ಹೂ ಮಾರುತ್ತಿದ್ದ 11 ವರ್ಷದ ಬಾಲಕಿಯನ್ನು ಆಟೋ ಚಾಲಕನೋರ್ವ ಅಪಹರಿಸಿ ಅತ್ಯಾಚಾರ ಎಸಗಿದ್ದಾನೆ.  ಬಳಿಕ ಬಾಲಕಿಗೆ ಪ್ರಜ್ಞೆ ತಪ್ಪುತ್ತಿದ್ದಂತೆ ಆಕೆಯನ್ನು ಅರಣ್ಯ ಪ್ರದೇಶದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿಯೇ ಬಿಟ್ಟು ಪರಾರಿಯಾಗಿದ್ದ. ಬಳಿಕ ಪೊಲೀಸರು 300 ಸಿಸಿಟಿವಿ ಪರಿಶೀಲಿಸಿ ಕಾಮುಕನ ಹೆಡೆಮುರಿ ಕಟ್ಟುವಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. 40 ವರ್ಷದ ದುರ್ಗೇಶ್ ಬಂಧಿತ ಕಾಮುಕ.

ಜನವರಿ 11 ರಂದು ದೆಹಲಿ ಪ್ರಸಾದ್ ನಗರ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಪುಟ್ಟ ಹುಡುಗಿ ಗುಲಾಬಿ ಹೂ ಮಾರುತ್ತಾ ಸಿಗ್ನಲ್ ಬಳಿ ನಿಂತಿರುವುದನ್ನು ಆರೋಪಿ ದುರ್ಗೇಶ್ ನೋಡಿದ್ದಾನೆ. ಬಳಿಕ ತನ್ನ ಆಟೋದಲ್ಲಿದ್ದ ಪ್ರಯಾಣಿಕರನ್ನು ಇಳಿಸಿ ಬಾಲಕಿ ಬಳಿ ಹೋಗಿದ್ದು, ಎಲ್ಲಾ ಹೂವುಗಳನ್ನು ಮಾರಲು ಸಹಾಯ ಮಾಡುವುದಾಗಿ ನಂಬಿಸಿ ಬಾಲಕಿಯನ್ನು ಆಟೋದಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಈ ಕೃತ್ಯ ಎಸಗಿದ್ದಾನೆ ಎಂದು ತಿಳಿದುಬಂದಿದೆ.

ವಿಚಾರಣೆ ವೇಳೆ ಆರೋಪಿ ದುರ್ಗೇಶ್ , ಈ ಹಿಂದೆ ಟ್ರಾಫಿಕ್ ಸಿಗ್ನಲ್‌ನಲ್ಲಿ ಹುಡುಗಿಯನ್ನು ಗಮನಿಸಿ ಅಪಹರಣಕ್ಕೆ ಪ್ಲ್ಯಾನ್ ರೂಪಿಸಿದ್ದಾಗಿ ಬಾಯ್ಬಿಟ್ಟಿದ್ದಾನೆ. ಕಾಮುಕ ತಪ್ಪೊಪ್ಪಿಗೆಯ ಬಳಿಕ ಪೊಲೀಸರು ರಕ್ತದ ಕಲೆಗಳಿರುವ ಬಟ್ಟೆಗಳು ಮತ್ತು ಇತರೆ ಸಾಕ್ಷಿಗಳನ್ನು ವಶಪಡಿಸಿಕೊಂಡಿದ್ದಾರೆ. ಘಟನೆಯಿಂದ ಆಘಾತಕ್ಕೊಳಗಾದ ಮಗುವಿಗೆ ವೈದ್ಯಕೀಯ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಆರೋಪಿಯ ಪತ್ತೆಗಾಗಿ ಪೊಲೀಸರು ಸುಮಾರು 15 ಮಾರ್ಗಗಳಲ್ಲಿ ಅಳವಡಿಸಲಾದ ಸುಮಾರು 300 ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಿದ್ದಾರೆ. ಒಂದು ದೃಶ್ಯದಲ್ಲಿ ಹುಡುಗಿ ಆಟೋ ಹತ್ತುತ್ತಿರುವುದು ಕಂಡುಬಂದಿದೆ. ನಂತರ ಆ ವಾಹನದ ನೋಂದಣಿ ಸಂಖ್ಯೆಯನ್ನು ಪತ್ತೆಹಚ್ಚಲಾಯಿತು. ಇದು ಅದೇ ದಿನ ಆರೋಪಿಯನ್ನು ಗುರುತಿಸಿ ಬಂಧಿಸಲು ಸಹಾಯವಾಗಯ್ತು ಎಂದು ಪೊಲೀಸರು ತಿಳಿಸಿದ್ದಾರೆ. ಇನ್ನು ಈ ಬಗ್ಗೆ ಪೊಲೀಸರು ಅಪಹರಣ ಮತ್ತು ಅತ್ಯಾಚಾರ, ಪೋಕ್ಸೊ ಕಾಯ್ದೆ ಅಡಿಯಲ್ಲಿ ಆರೋಪಿ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.


Share with

Leave a Reply

Your email address will not be published. Required fields are marked *