ಚಿಕ್ಕಮಗಳೂರು: ಚಾರ್ಮಾಡಿ ಘಾಟಿಯಲ್ಲಿ 2000 ಅಡಿ ಪ್ರಪಾತಕ್ಕೆ ಬಿದ್ದ ಟಿಪ್ಪರ್ ಲಾರಿ

Share with

ಚಿಕ್ಕಮಗಳೂರು: ಚಾರ್ಮಾಡಿ ಘಾಟ್‌ನಲ್ಲಿ 2000 ಅಡಿ ಪ್ರಪಾತಕ್ಕೆ ಟಿಪ್ಪರ್ ಲಾರಿ ಉರುಳಿ ಲಾರಿ ಚಾಲಕ ಗಂಭೀರ ಗಾಯಗೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಸೋಮನಕಾಡು ಎಂಬಲ್ಲಿ ನಡೆದಿದೆ.

ಪೊಲೀಸ್, ಅರಣ್ಯ ಸಿಬ್ಬಂದಿ, ಸಮಾಜ ಸೇವಕ ಆರೀಫ್, ರೆಹಮಾನ್ ಅವರು ಸೊಂಟಕ್ಕೆ ಹಗ್ಗ ಕಟ್ಟಿಕೊಂಡು ಪ್ರಪಾತಕ್ಕೆ ಇಳಿದು ಚಾಲಕನನ್ನ ರಕ್ಷಿಸಿದ್ದಾರೆ.

ಮೂಡಿಗೆರೆಯಿಂದ ಚಾರ್ಮಾಡಿಗೆ ಹೋಗುತ್ತಿದ್ದ ಟಿಪ್ಪರ್ ಲಾರಿ ಮಂಜು ಕವಿದ ಕಾರಣ ರಸ್ತೆ ಕಾಣದೆ ನಿಯಂತ್ರಣ ತಪ್ಪಿ ಚಾರ್ಮಾಡಿ ಘಾಟ್‌ನ ಪ್ರಾಪಾತಕ್ಕೆ ಉರುಳಿ ಬಿದ್ದಿದೆ. ಟಿಪ್ಪರ್ ಲಾರಿ ಮೂಡಿಗೆರೆಯಿಂದ ಚಾರ್ಮಾಡಿಗೆ ಹೋಗುತ್ತಿತ್ತು. ಭಾರೀ ಮಂಜು ಕವಿದ ಕಾರಣ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪ್ರಪಾತಕ್ಕೆ ಬಿದ್ದಿದೆ.

ಚಾರ್ಮಾಡಿ ಘಾಟಿಯಲ್ಲಿ 2000 ಅಡಿ ಪ್ರಪಾತಕ್ಕೆ ಬಿದ್ದ ಟಿಪ್ಪರ್ ಲಾರಿ

ಪೊಲೀಸ್, ಅರಣ್ಯ ಸಿಬ್ಬಂದಿ, ಸಮಾಜ ಸೇವಕ ಆರೀಫ್, ರೆಹಮಾನ್ ಅವರು ಸೊಂಟಕ್ಕೆ ಹಗ್ಗ ಕಟ್ಟಿಕೊಂಡು 2000 ಅಡಿ ಪ್ರಪಾತಕ್ಕೆ ಇಳಿದು ಚಾಲಕನನ್ನ ರಕ್ಷಿಸಿದ್ದಾರೆ. ಲಾರಿ ಚಾಲಕನ ಸೊಂಟ ಮುರಿತಗೊಂಡಿದ್ದು, ಅವರನ್ನು ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. 2000 ಅಡಿ ಆಳದ ಪ್ರಪಾತಕ್ಕೆ ಬಿದ್ದ ಲಾರಿ ಸಂಪೂರ್ಣ ಜಖಂಗೊಂಡಿದೆ. ಪೊಲೀಸ್, ಅರಣ್ಯ ಸಿಬ್ಬಂದಿ ಹಾಗೂ ಸ್ಥಳೀಯರ ಕಾರ್ಯಚಾರಣೆ ನಡೆಸಿದ್ದಾರೆ. ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Share with

Leave a Reply

Your email address will not be published. Required fields are marked *