ಬೆಳ್ತಂಗಡಿ: ಚಾರ್ಮಾಡಿ ಘಾಟಿಯ ಸೋಮನಕಾಡು ನೀರಿನ ಫಾಲ್ಸ್ ಸಮೀಪ ಲಾರಿಯೊಂದು ವಿಪರೀತ ಮಂಜಿನ ಕಾರಣದಿಂದ ದಾರಿ ಕಾಣದೆ ರಸ್ತೆಯ ಬದಿಯಲ್ಲಿರುವ ತಡೆಗೋಡೆಗೆ ಡಿಕ್ಕಿ ಹೊಡೆದು ಪ್ರಪಾತಕ್ಕೆ ಉರುಳಿದ ಘಟನೆ ಸೆ.೧೫ ರಂದು ತಡರಾತ್ರಿ ನಡೆದಿದೆ. ಚಾಲಕ ಹಾಗೂ ನಿರ್ವಾಹಕ ಪ್ರಾಣಾಪಾಯದಿಂದ ಪಾರಾಗಿದ್ದು, ಲಾರಿ ಉರುಳಿ ಪ್ರಪಾತದಲ್ಲಿರುವ ಮರಕ್ಕೆ ಡಿಕ್ಕಿ ಹೊಡೆದು ಅಲ್ಲೇ ನಿಂತಿದೆ.