ಉಳ್ಳಾಲ: ಉಳ್ಳಾಲ ಠಾಣಾ ವ್ಯಾಪ್ತಿಯ ಉಚ್ಚಿಲ ರೈಲ್ವೇ ಗೇಟ್ ಬಳಿ ವ್ಯಕ್ತಿ ಒಬ್ಬ ರೈಲಿನ ಅಡಿಗೆ ತಲೆಯಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಮೃತ ಪಟ್ಟ ವ್ಯಕ್ತಿ ಮಂಗಳೂರು ನಗರದ ಕೊಂಚಾಡಿಯ ನಿವಾಸಿ ಪ್ರಶಾಂತ್ (44) ಎಂದು ಗುರುತಿಸಿದ್ದು, ಸೆ.24 ರಂದು ಸಂಜೆ ಮನೆಯಿಂದ ಹೊರಟ ಪ್ರಶಾಂತ್ ಅವರು ಬೆಳಿಗ್ಗೆ ರೈಲ್ವೇ ಗೇಟ್ ಬಳಿ ಶವವಾಗಿ ಪತ್ತೆಯಾಗಿದ್ದಾರೆ.
ಅವರು ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವ ಮಾಹಿತಿ ವೈದ್ಯಕೀಯ ವರದಿಯಿಂದ ಲಭ್ಯವಾಗಿದ್ದು, ಮಂಗಳೂರು ರೈಲ್ವೇ ಪೊಲೀಸ್ ಠಾಣೆಯ ಎ.ಎಸ್.ಐ ಮಧುಚಂದ್ರ ನೇತೃತ್ವದಲ್ಲಿ ಪೊಲೀಸ್ ತಂಡ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.