ಪಣಂಬೂರು: ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ಬಬ್ಬು ಸ್ವಾಮಿ ದೈವಸ್ಥಾನದಲ್ಲಿ ಮಡಿಕೇರಿ ಮೂಲದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ರೀತಿಯಲ್ಲಿ ಪತ್ತೆಯಾಗಿದ್ದಾರೆ.
ಮೃತರನ್ನು ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಗೋಪಾಲ (64) ಎಂದು ಪೊಲೀಸರು ಮಾಹಿತಿ ನೀಡಿದ್ದು, ಗೋಪಾಲ ಅವರು ಮಡಿಕೇರಿಯಿಂದ ಸೋಮವಾರ ತಣ್ಣೀರು ಬಾವಿ ಬೀಚ್ ಗೆ ಬಂದಿದ್ದು, ಬಳಿಕ ದೈವಸ್ಥಾನ ಪ್ರಾಂಗಣದಲ್ಲಿ ನೈಲಾನ್ ಹಗ್ಗದಿಂದ ಕುತ್ತಿಗೆಗೆ ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.
ಆತ್ಮಹತ್ಯೆಗೆ ನಿಖರ ಕಾರಣಗಳು ತಿಳಿದು ಬಂದಿಲ್ಲ. ಘಟನೆಗೆ ಸಂಬಂಧಿಸಿ ಪಣಂಬೂರು ಪೊಲೀಸರು ಸ್ಥಳ ಮಹಜರು ನಡೆಸಿ ಪ್ರಕರಣವನ್ನು ದಾಖಲಿಸಿ ಕೊಂಡಿದ್ದಾರೆ.