ಐತ್ತೂರು: ಆನೆ ತುಳಿತ್ತಕ್ಕೊಳಗಾದ ವ್ಯಕ್ತಿ ಮೃತ್ಯು.!

Share with

ಕಡಬ: ತಿಂಗಳ ಹಿಂದೆ ಐತ್ತೂರು ಸಮೀಪ ಆನೆ ತುಳಿತ್ತಕ್ಕೊಳಗಾಗಿ ಗಂಭೀರ ಗಾಯಗೊಂಡಿದ್ದ ಗೇರ್ತಿಲ ನಿವಾಸಿ ಚೋಮ ಅವರು ಚಿಕಿತ್ಸೆ ಫಲಕಾರಿಯಾಗದೆ ನ.7ರಂದು ಮೃತಪಟ್ಟಿದ್ದಾರೆ.


ಮರ್ದಾಳದಿಂದ ಮನೆ ಕಡೆಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಐತ್ತೂರು ಕೊಣಾಜೆ ರಸ್ತೆಯಲ್ಲಿ ಕಾಡಾನೆ ದಾಳಿ ನಡೆಸಿ ಗಂಭಿರ ಗಾಯಗೊಂಡಿದ್ದರು. ಬಳಿಕ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಕೆಲ ದಿನಗಳ ಹಿಂದೆ ಅವರನ್ನು ಮನೆಗೆ ತರಲಾಗಿತ್ತು. ಚೋಮ ಅವರು ಇಂದು ಬೆಳಗ್ಗಿನ ಜಾವ ಮೃತಪಟ್ಟಿದ್ದಾರೆ.


Share with

Leave a Reply

Your email address will not be published. Required fields are marked *