ಸುಳ್ಯ: ಹೊಳೆಯ ಪಾಲ ದಾಟುತ್ತಿರುವ ಸಂದರ್ಭದಲ್ಲಿ ಆಯ ತಪ್ಪಿ ಹೊಳಗೆ ಬಿದ್ದು ವ್ಯಕ್ತಿಯೊಬ್ಬರು ನೀರಿನಲ್ಲಿ ಕೊಚ್ಚಿಕೊಂಡು ಹೋಗಿರುವ ಘಟನೆ ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ಕೂರ್ನಡ್ಕದಿಂದ ವರದಿಯಾಗಿದೆ.
ನೀರು ಪಾಲಾಗಿರುವ ವ್ಯಕ್ತಿಯನ್ನು ಕೇರಳ ಮೂಲದವರು ಎಂದು ಹೇಳಲಾಗಿದ್ದು ತೋಟದಲ್ಲಿ ಕೂಲಿ ಕೆಲಸ ಮುಗಿಸಿ ಹಿಂತಿರುಗುತ್ತಿದ್ದ ಸಂಧರ್ಭ ಈ ಘಟನೆ ಸಂಭವಿಸಿರುವುದಾಗಿ ತಿಳಿದು ಬಂದಿದೆ.
ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ಸುಳ್ಯ ಪೊಲೀಸರು ಭೇಟಿ ನೀಡಿ ಕಾಣೆಯಾಗಿರುವ ವ್ಯಕ್ತಿಗಾಗಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.