ಉಡುಪಿ: ಉಚ್ಚಿಲ ಶಕ್ತಿ ಕೇಂದ್ರದ ಕಾರ್ಯಕರ್ತರ ಸಭೆಯು ಉಚ್ಚಿಲ ಭಾಗದಲ್ಲಿ ಮಾ.24ರಂದು ನಡೆಯಿತು.
ಸಭೆಯಲ್ಲಿ ಭಾಗವಹಿಸಿ ಶಾಸಕರಾದ ಗುರ್ಮೆ ಸುರೇಶ ಶೆಟ್ಟಿ ಮಾತನಾಡಿ, ಧರ್ಮ, ಜಾತಿ ಎಂಬ ಬೇದ ಭಾವವನ್ನು ಮರೆತು ಒಗ್ಗಟ್ಟಾಗಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಅತ್ಯಧಿಕ ಮತಗಳಿಂದ ಗೆಲ್ಲಿಸಲು ಶ್ರಮಿಸಬೇಕು ಎಂದರು.
ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ರಾಜ್ಯ ಬಿಜೆಪಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ಶಿಲ್ಪಾ ಜಿ ಸುವರ್ಣ, ಕಾಪು ಮಂಡಲ ಬಿಜೆಪಿ ಕಾರ್ಯದರ್ಶಿಗಳಾದ ಕೇಸರಿ ಯುವರಾಜ್, ಬಡಾ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶಿವಕುಮಾರ್ ಮೆಂಡನ್, ಬಡಾ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಚಂದ್ರಶೇಖರ್ ಕೋಟ್ಯಾನ್, ಉಚ್ಚಿಲ ಶಕ್ತಿ ಕೇಂದ್ರದ ಸಹ ಸಂಚಾಲಕರಾದ ವಸಂತ್ ದೇವಾಡಿಗ, ಬಡಾ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಚಂದ್ರಶೇಖರ್ ಉಪಸ್ಥಿತರಿದ್ದರು.