ಉಡುಪಿ: ಮನೆಯಿಂದ ಹೊರಗೆ ಹೋದ ವ್ಯಕ್ತಿ ವಾಪಸು ಮನೆಗೆ ಬಾರದೆ ನಾಪತ್ತೆಯಾದ ಘಟನೆ ಉಡುಪಿಯಲ್ಲಿ ನಡೆದಿದೆ.
ನಾಪತ್ತೆಯಾದ ವ್ಯಕ್ತಿಯನ್ನು ಕುತ್ಪಾಡಿಯ ಜಗದೀಶ್(42) ಎಂದು ಗುರುತಿಸಲಾಗಿದೆ.
ಕಟಪಾಡಿಯಲ್ಲಿರುವ ಮಹೇಶ್ ಫರ್ನಿಚರ್‌ನಲ್ಲಿ ಕೆಲಸ ಮಾಡಿಕೊಂಡಿದ್ದ ಕುತ್ಪಾಡಿಯ ಜಗದೀಶ್ ಎಂಬವರು ಮಾ.6ರಂದು ರಾತ್ರಿ ಊಟ ಮಾಡಿ ಮನೆಯಿಂದ ಹೊರಗೆ ಹೋದವರು ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.