
ಮಂಗಳೂರು: ಪಂಪ್‌ವೆಲ್‌ನಿಂದ ತೊಕ್ಕೊಟ್ಟು ಕಡೆಗೆ ತೆರಳುವ ಉಳ್ಳಾಲ ನೇತ್ರಾವತಿ ಸೇತುವೆಯಲ್ಲಿ ಲಾರಿಯೊಂದು ನಿಂತಿದ್ದ ಪರಿಣಾಮವಾಗಿ ಸರಣಿ ಅಪಘಾತ ಸಂಭವಿಸಿದ್ದು ಲಾರಿ, ಕಾರು, ಆಟೊ ರಿಕ್ಷಾ ಸಹಿತ ಹಲವು ವಾಹನಗಳಿಗೆ ಹಾನಿಯಾಗಿದ್ದು ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.
ಮಳೆ ಸುರಿಯುತ್ತಿದ್ದ ಕಾರಣ ಒಂದರ ಹಿಂದೆ ಒಂದರಂತೆ ವಾಹನಗಳು ಚಲಿಸುತ್ತಿದ್ದು, ಈ ಸಂದರ್ಭದಲ್ಲಿ ನಿಂತಿದ್ದ ಲಾರಿಯನ್ನು ಗಮನಿಸದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಲಾರಿಗೆ
ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಇದರ ಹಿಂದಿನಿಂದ ಬರುತ್ತಿದ್ದ ಕಾರುಗಳು ಒಂದಕ್ಕೊಂದು ಡಿಕ್ಕಿ ಹೊಡೆದಿದ್ದು ಅಲ್ಲದೆ ಪಿಕಪ್, ಬಸ್ ಕೂಡಾ ಡಿಕ್ಕಿ ಹೊಡೆದಿದ್ದು ವಾಹನಗಳಿಗೆ ಹಾನಿಯಾಗಿದೆ ಎಂದು ತಿಳಿದು ಬಂದಿದೆ.
ಸರಣಿ ಅಪಘಾತದಿಂದಾಗಿ ಹೆದ್ದಾರಿಯಲ್ಲಿ 2 ಗಂಟೆ ಕಾಲ ವಾಹನ ಸಂಚಾರ ದಟ್ಟಣೆ ಉಂಟಾಯಿತು. ಮಂಗಳೂರು ದಕ್ಷಿಣ ಸಂಚಾರ ಠಾಣೆಯ ಪೊಲೀಸರು ವಾಹನ ಸಂಚಾರ ಸುಸ್ಥಿತಿಗೆ ತರಲು ಹರಸಾಹಸ ಪಟ್ಟರು ಎಂದು ತಿಳಿದು ಬಂದಿದೆ.