
ಉಡುಪಿ: ಮೊಬೈಲ್ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್ ನಿಲ್ದಾಣದಲ್ಲಿ ಇಂದು ಸಂಭವಿಸಿದೆ.
ಬಸ್ ಹತ್ತುವ ವೇಳೆ ಪ್ರಯಾಣಿಕರ ಮೊಬೈಲ್ ಗಳನ್ನು ಈ ಕಳ್ಳಿಯರ ಗ್ಯಾಂಗ್ ಕಳ್ಳತನ ಮಾಡುತ್ತಿತ್ತು. ಈ ವೇಳೆ ಕದ್ದು ಪರಾರಿಯಾಗಲು ಯತ್ನಿಸಿದ್ದ ಕಳ್ಳಿಯರ ಪೈಕಿ ಸೆರೆ ಸಿಕ್ಕ ಓರ್ವಳನ್ನು ಸಾರ್ವಜನಿಕರೇ ಹಿಡಿದು ಥಳಿಸಿದ್ದಾರೆ. ಇಬ್ಬರು ಕಳ್ಳಿಯರು ಎಸ್ಕೆಪ್ ಆಗಿದ್ದಾರೆ. ಓರ್ವಳಿಗೆ ಧರ್ಮದೇಟು ನೀಡಿದ ಬಳಿಕ ಸ್ಥಳಕ್ಕೆ ಆಗಮಿಸಿದ ಪೊಲೀಸರಿಗೆ ಒಪ್ಪಿಸಲಾಯಿತು.