ಬೆಳ್ತಂಗಡಿ: ಮಹಿಳೆಯ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್; ಪತ್ನಿಯನ್ನು ಕೊಲೆಗೈದು ಬಾವಿಗೆ ಎಸೆದ ಪತಿ

Share with

ಬೆಳ್ತಂಗಡಿ: ಬೆಳ್ತಂಗಡಿಯ ಉಜಿರೆಯ ಬಾವಿಯಲ್ಲಿ ಸಿಕ್ಕ ವಿವಾಹಿತ ಮಹಿಳೆಯ ಶವ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು ಪತಿಯೇ ಕೊಲೆಗೈದು ಬಾವಿಗೆ ತಳ್ಳಿರುವ ವಿಚಾರ ದೃಢಪಟ್ಟಿದೆ.

ಪತಿಯೇ ಕೊಲೆಗೈದು ಬಾವಿಗೆ ತಳ್ಳಿರುವ ವಿಚಾರ ದೃಢಪಟ್ಟಿದೆ.

ಮಾಚಾರು ಕೆಂಪನೊಟ್ಟು ನಿವಾಸಿ ಶಶಿಕಲಾ (25) ಮೃತಪಟ್ಟ ಮಹಿಳೆಯಾಗಿದ್ದು, ಶಶಿಕಲಾ ಪತಿ ಸುಧಾಕರ ನಾಯ್ಕ (31)ನನ್ನು ಬಂಧಿಸಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ನ್ಯಾಯಾಲಯ ಆತನಿಗೆ ನ್ಯಾಯಾಂಗ ಬಂಧನವನ್ನು ವಿಧಿಸಿದೆ.

ಮೇಲ್ನೋಟಕ್ಕೆ ಅನೈತಿಕ ಸಂಬಂಧ ವಿಚಾರದಲ್ಲಿ ಪತ್ನಿ ಜತೆ ಜಗಳವಾಡಿದ್ದು ಇದೇ ವಿಚಾರದಲ್ಲಿ ಕೋಪದಲ್ಲಿ ಕತ್ತು ಹಿಸುಕಿ ಕೊಲೆ ಮಾಡಿ ಬಾವಿಗೆ ತಳ್ಳಿ ಕುಟುಂಬದವರಿಗೆ ಹಾಗೂ ಧರ್ಮಸ್ಥಳ ಪೊಲೀಸರಿಗೆ ಆತ್ಮಹತ್ಯೆ ನಾಟಕವಾಡಿದ್ದಾನೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳದಲ್ಲಿ ಅನುಮಾನಾಸ್ಪದ‌ ರೀತಿಯಲ್ಲಿ ವರ್ತಿಸಿದಾಗ ಪೊಲೀಸರು ಆತನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದಾಗ ವಿಚಾರ ಬಾಯಿಬಿಟ್ಟಿದ್ದಾನೆ.


Share with

Leave a Reply

Your email address will not be published. Required fields are marked *