ಹುಲಿ ಉಗುರಿನ ಪೆಂಡೆಂಟ್ ಧರಿಸಿದ್ದ ಸುಳ್ಯದ ಮಹಿಳೆಗೆ ಅರಣ್ಯಾಧಿಕಾರಿಗಳ ಬುಲಾವ್..!

Share with

ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ನಗರ ಪಂಚಾಯತ್ ಉದ್ಯೋಗಿ ಕೊರಳಲ್ಲಿ ಹುಲಿ ಉಗುರು ಪೆಂಡೆಂಟ್ ಮಾದರಿ ಇದ್ದ ಫೋಟೊಗಳು ವೈರಲ್ ಆದ ಕಾರಣ ವಿಚಾರಣೆಗೆ ಬರುವಂತೆ ಅರಣ್ಯಾಧಿಕಾರಿಗಳು ಸೂಚಿಸಿದ್ದರು.

ಹುಲಿ ಉಗುರಿನ ಪೆಂಡೆಂಟ್ ಧರಿಸಿದ್ದ ಸುಳ್ಯದ ಮಹಿಳೆ.

ಸುಳ್ಯದ ನಗರ ಪಂಚಾಯತ್ ಉದ್ಯೋಗಿ ಶಶಿಕಲಾ ಅವರ ಕೊರಳಿನಲ್ಲಿ ಹುಲಿ ಉಗುರನ್ನು ಹೋಲುವ ಪೆಂಡೆಂಟ್ ಧರಿಸಿದ್ದ ಪೋಟೋಗಳು ಎಲ್ಲೆಡೆ ವೈರಲ್ ಆಗತೊಡಗಿದ್ದು, ಈ ಹಿನ್ನಲೆಯಲ್ಲಿ ಸುಳ್ಯ ಅರಣ್ಯ ಇಲಾಖೆಯವರು ಶಶಿಕಲಾ ಅವರನ್ನು ಸಂಪರ್ಕಿಸಿ ಕಚೇರಿಗೆ ಬರುವಂತೆ ಸೂಚಿಸಿದ್ದರು.

ಶಶಿಕಲಾ ಅವರು ವಲಯಾರಣ್ಯಾಧಿಕಾರಿಗಳ ಕಚೇರಿಗೆ ತೆರಳಿ ಪೆಂಡೆಂಟ್ ಅನ್ನು ಒಪ್ಪಿಸಿದ್ದಾರೆ. ಇದು ಅಸಲಿ ಹುಲಿ ಉಗುರಿನ ಪೆಂಡೆಂಟ್ ಅಲ್ಲ, ಮಾರಾಟ ಮಾಡಲು ಬಂದವರಿಂದ ನನ್ನ ತಾಯಿ ಖರೀದಿಸಿದ್ದು ಎಂದು ಶಶಿಕಲಾ ಅವರು ಹೇಳಿದ್ದಾರೆ. ಪೆಂಡೆಂಟ್ ಅನ್ನು ಪಡೆದುಕೊಂಡಿದ್ದು, ಲ್ಯಾಬ್ ನಲ್ಲಿ ಪರೀಕ್ಷೆ ನಡೆಸುತ್ತೇವೆ. ಒರಿಜಿನಲ್ ಆಗಿದ್ದರೆ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದೆಂದು ಅರಣ್ಯ ಇಲಾಖೆಯವರು ತಿಳಿಸಿದ್ದಾರೆ.


Share with

Leave a Reply

Your email address will not be published. Required fields are marked *