ಪುತ್ತೂರು: ರಾತ್ರಿ ಸುಮಾರು 8.30ರ ಸಮಯಕ್ಕೆ ನನ್ನ ಮನೆಗೆ ಚಡ್ಡಿ ಗ್ಯಾಂಗ್ ದರೋಡೆಕೋರರು ಬಂದಿದ್ದಾರೆ. ತಲವಾರು ತೋರಿಸಿ ಬೆದರಿಸಿ, ಹಣ, ಒಡವೆ ಕೇಳಿದ್ದಾರೆ. ಗ್ಯಾಂಗ್ನಲ್ಲಿ ನಾಲ್ವರು ಇದ್ದರು ನಾನು ಕಿಟಕಿಯ ಮೂಲಕ ಅವರ ಫೋಟೋ ತೆಗೆದಿದ್ದೇನೆ ಎಂದೇಳಿಕೊಂಡು ಮಹಿಳೆಯೋರ್ವರು ಆ ಫೋಟೋವನ್ನು ವೈರಲ್ ಮಾಡುವ ಕುತ್ಯಾತ ಚಡ್ಡಿ ಗ್ಯಾಂಗ್ ದರೋಡೆಕೋರರೇ ಬಂದಿದ್ದಾರೆ ಎನ್ನುವ ಹಾಗೆ ಕಥೆ ಕಟ್ಟಿ ಜನರಲ್ಲಿ ಭಯ ಹುಟ್ಟಿಸಿದ ಘಟನೆ ಕೆಯ್ಯರಿನಲ್ಲಿ ನ.6 ರಂದು ನಡೆದಿದೆ.
ಸ್ಥಳಕ್ಕೆ ಆಗಮಿಸಿದ ಸರ್ಕಲ್ ಇನ್ಸ್ಪೆಕ್ಟರ್ ರವಿ.ಬಿ.ಎಸ್.ರವರು ಮಹಿಳೆಯ ಮೊಬೈಲ್ ಫೋನ್ ಪರಿಶೀಲಿಸಿದಾಗ ಇದೊಂದು ಕಟ್ಟು ಕಥೆ ಆಗಿದ್ದು ಮಹಿಳೆ ಕಳಿಸಿದ ಫೋಟೋಗಳು 2 ವರ್ಷಗಳ ಹಿಂದೆ ಮಳೆಯಾಲಂನ ಮನೋರಮಾ ನ್ಯೂಸ್ನಲ್ಲಿ ಪ್ರಸಾರಗೊಂಡ ಕೊಟ್ಟಾಯಂನಲ್ಲಿ ನಡೆದ ಒಂದು ಸ್ಟೋರಿಯಲ್ಲಿ ಬರುವ ಫೋಟೋಗಳಾಗಿವೆ ಎಂಬುದನ್ನು ಪತ್ತೆ ಹಚ್ಚಿದ್ದಾರೆ.