ಬೆಳ್ತಂಗಡಿ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಯುವಕನೋರ್ವ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಘಟನೆ ವರದಿಯಾಗಿದೆ.
ಬೆಳ್ತಂಗಡಿ ತಾಲೂಕಿನ ಸೋಣಂದೂರು ನಿವಾಸಿ ಪ್ರಶಾಂತ್ ಮೃತ ಯುವಕನಾಗಿದ್ದು, ಸೆ.18 ರಂದು ರಾತ್ರಿಯ ವೇಳೆ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ, ಕೂಡಲೇ ಮನೆಯವರು ಆತನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಯನ್ನು ನೀಡಿದ್ದರು. ಆದರೆ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಘಟನೆಯ ಬಗ್ಗೆ ಪುಂಜಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.