ಹುಲಿವೇಷ ಕುಣಿತದ ವೇಳೆ ಆಯ ತಪ್ಪಿ ಬಿದ್ದ ಯುವಕ

Share with

ಮಂಗಳೂರು: ಮಂಗಳೂರಿನ ಮಂಗಳಾದೇವಿ ದೇವಸ್ಥಾನದ ವಠಾರದಲ್ಲಿ ಹುಲಿವೇಷ ಕುಣಿತದ ವೇಳೆ ಯುವಕನೊಬ್ಬ ಆಯ ತಪ್ಪಿ ಬಿದ್ದು ಗಾಯಗೊಂಡ ಘಟನೆ ನಡೆದಿದೆ.

ಮಂಗಳಾದೇವಿ ದೇವಸ್ಥಾನದ ವಠಾರದಲ್ಲಿ ಹುಲಿವೇಷ ಕುಣಿತದ ವೇಳೆ ಯುವಕನೊಬ್ಬ ಆಯ ತಪ್ಪಿ ಬಿದ್ದು ಗಾಯಗೊಂಡ ಘಟನೆ ನಡೆದಿದೆ. 

ಮುಳಿಹಿತ್ಲು ಎಂಬಲ್ಲಿನ ಹುಲಿವೇಷ ತಂಡದ ಕುಣಿತದ ವೇಳೆ ಈ ದುರ್ಘಟನೆ ನಡೆದಿದೆ. ಹುಲಿ ವೇಷಧಾರಿಯೊಬ್ಬರು ಕಸರತ್ತು ಪ್ರದರ್ಶನದ ವೇಳೆ ರಿವರ್ಸ್ ಪಲ್ಟಿ ಹೊಡೆಯುತ್ತಿದ್ದರು. ಈ ವೇಳೆ ಆಯ ತಪ್ಪಿ ತಲೆ ನೆಲಕ್ಕೆ ಬಡಿದು ಕತ್ತು ಉಳುಕಿದ ಪರಿಣಾಮ ಈ ಅನಾಹುತ ಸಂಭವಿಸಿದೆ. ತಕ್ಷಣ ಆಸ್ಪತ್ರೆಗೆ ದಾಖಲಿಸಿ ಹುಲಿವೇಷಧಾರಿ ಯುವಕನಿಗೆ ಚಿಕಿತ್ಸೆ ನೀಡಲಾಗಿದೆ. ಸದ್ಯ ಸಣ್ಣ ಗಾಯಗಳೊಂದಿಗೆ ಅಪಾಯದಿಂದ ಯುವಕ ಪಾರಾಗಿದ್ದಾನೆ ಎಂದು ತಿಳಿದು ಬಂದಿದೆ.


Share with

Leave a Reply

Your email address will not be published. Required fields are marked *