ಬಂಟ್ವಾಳ: ತಾಲೂಕಿನ ಕುಕ್ಕಿಪ್ಪಾಡಿ ಗ್ರಾಮದ ಯುವಕನೋರ್ವ ಇಂಡೋನೇಷ್ಯಾದ ರಾಷ್ಟ್ರೀಯ ಕ್ರಿಕೆಟ್ ತಂಡಕ್ಕೆ ಆಯ್ಕೆಯಾಗಿದ್ದಾರೆ.
ಕುಕ್ಕಿಪ್ಪಾಡಿ ಹುಣಸೆ ಬೆಟ್ಟು ನಿವಾಸಿ ಮಹಾಬಲ ಶೆಟ್ಟಿ ಅವರ ಪುತ್ರ ಧನೇಶ್ ಶೆಟ್ಟಿ ಇಂಡೋನೇಷ್ಯಾ ಕ್ರಿಕೆಟ್ ತಂಡಕ್ಕೆ ಆಯ್ಕೆಯಾದವರು. ವಿವಾಹಿತರಾಗಿರುವ ಧನೇಶ್ ಅವರು ತನ್ನ ಪತ್ನಿಯೊಂದಿಗೆ ಇಂಡೋನೇಷ್ಯಾದಲ್ಲಿ ನೆಲೆಸಿದ್ದು, ಆರೋಗ್ಯ ಸಂಸ್ಥೆಯಲ್ಲಿ ಕೆಲಸವನ್ನು ನಿರ್ವಹಿಸುತ್ತಿದ್ದಾರೆ.
ಕ್ರಿಕೆಟ್ ಆಸಕ್ತಿ ಹೊಂದಿದ್ದ ಇವರು ಇದೀಗ ಇಂಡೋನೇಷ್ಯಾದ ರಾಷ್ಟ್ರೀಯ ಕ್ರಿಕೆಟ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.