ಸಾಲದ ಬಾಧೆಯಿಂದ ಮಾನಸಿಕವಾಗಿ ನೊಂದು ಯುವಕ ನೇಣಿಗೆ ಶರಣು!

Share with

ಬಂಟ್ವಾಳ: ಸಾಲದ ಬಾಧೆಯಿಂದ ಮಾನಸಿಕವಾಗಿ ನೊಂದಿದ್ದ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಸಜೀಪದಲ್ಲಿ ನಡೆದಿದೆ.

ಸಜೀಪ ಪಡು ಗ್ರಾಮದ ತಲೆಮೊಗರು ನಿವಾಸಿ ಸನತ್ ಕುಮಾರ್ ಆತ್ಮಹತ್ಯೆ ‌ಮಾಡಿಕೊಂಡ ಯುವಕನಾಗಿದ್ದು, ಸನತ್ ಅವರು ಮೀನು ವ್ಯಾಪಾರ ಮಾಡಿಕೊಂಡು ಜೀವನ ಸಾಗಿಸುತ್ತಿದ್ದು, ಮೀನು ಮಾರಾಟಕ್ಕಾಗಿ ಇತ್ತೀಚಿಗೆ ಸಾಲ ಮಾಡಿ ಟೆಂಪೋ ರಿಕ್ಷಾವನ್ನು ಖರೀದಿ ಮಾಡಿದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ಮೀನು ವ್ಯಾಪಾರದಲ್ಲಿ ಹಣ ಕಳೆದುಕೊಂಡು ವಾಹನ ಖರೀದಿಗಾಗಿ ಮಾಡಿದ್ದ ಬ್ಯಾಂಕ್ ಸಾಲದ ಕಂತನ್ನು ಕಟ್ಟಲು ಸಾಧ್ಯವಾಗದೇ ಟೆಂಪೋವನ್ನು ಕೂಡ ಮಾರಾಟ ಮಾಡಿದ್ದ ಎನ್ನಲಾಗಿದೆ. ಜೊತೆಗೆ ಕೋಳಿ ಅಂಕದಲ್ಲಿಯೂ ಹಣ ಕಳೆದುಕೊಂಡು ಮಾನಸಿಕವಾಗಿ ‌ನೊಂದುಕೊಂಡಿದ್ದ ಎನ್ನಲಾಗಿದ್ದು, ಈತ ಮನೆಯವರು ಹತ್ತಿರದ ಭಜನಾ ಮಂದಿರದಲ್ಲಿ ನಡೆಯುವ ‌ನವರಾತ್ರಿ‌ ಪೂಜೆಗೆ ತೆರಳಿದ್ದ ವೇಳೆ ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ‌ಮಾಡಿಕೊಂಡಿದ್ದ.

ಪೂಜೆ ಮುಗಿಸಿಕೊಂಡು ಮನೆಗೆ ಬಂದ ವೇಳೆ ಈತನ ಕೋಣೆಗೆ ಬಾಗಿಲು ಹಾಕಿಕೊಂಡಿದ್ದನ್ನು ಗಮನಿಸಿ ಕರೆದಾಗ ಈತನಿಂದ ಯಾವುದೇ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ. ಹಾಗಾಗಿ ಬಾಗಿಲು ಮುರಿದು ನೋಡಿದಾಗ ಈತ ಪಕ್ಕಾಸಿಗೆ ಸೀರೆಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಗಮನಕ್ಕೆ ಬಂದಿದೆ.

ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಎಸ್.ಐ.ಹರೀಶ್ ಬೇಟಿ ನೀಡಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.


Share with

Leave a Reply

Your email address will not be published. Required fields are marked *