ಮೂಡುಬಿದಿರೆ: ಆಳ್ವಾಸ್ ನಲ್ಲಿ ಉದ್ಯೋಗಿಯಾಗಿದ್ದ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ ಎಂದು ವರದಿಯಾಗಿದೆ.
ಮೂಲತ: ಬಾಗಲಕೋಟೆಯ ನಿವಾಸಿಯಾದ ಇವರು, ಆಳ್ವಾಸ್ ಕಾಲೇಜಿನಲ್ಲಿ ಜರ್ನಲಿಸಂ ವಿಭಾಗದ ಹಳೆ ವಿದ್ಯಾರ್ಥಿ ಹನುಮಂತ (24) ಆತ್ಮಹತ್ಯೆ ಮಾಡಿಕೊಂಡಿರುವ ಯುವಕ ಎಂದು ಗುರುತಿಸಲಾಗಿದೆ.
ಆತ್ಮಹತ್ಯೆಗೆ ಕಾರಣ ಇನ್ನಷ್ಟೇ ತಿಳಿದು ಬರಬೇಕಿದ್ದು, ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.