ನಾಲ್ಕು ತಿಂಗಳ ಹಿಂದೆ ರಿಜಿಸ್ಟರ್ ಮ್ಯಾರೇಜ್ ಆಗಿದ್ದ ಯುವತಿ ವಿಷ ಸೇವಿಸಿ ಆತ್ಮಹತ್ಯೆ

Share with

ಕಡಬ: ನಾಲ್ಕು ತಿಂಗಳ ಹಿಂದೆಯಷ್ಟೇ ರಿಜಿಸ್ಟರ್ ಮದುವೆಯಾಗಿ ಪತಿ ಜೊತೆಗೆ ವಾಸವಿದ್ದ ಯುವತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಡಬ ತಾಲೂಕಿನ ಕುಟ್ರುಪ್ಪಾಡಿಯಲ್ಲಿ ನಡೆದಿದೆ.

ಕಡಬ ತಾಲೂಕಿನ ಕುಟ್ರುಪ್ಪಾಡಿ ಗ್ರಾಮದ ಶಿವಪ್ರಸಾದ್‌ ಎಂಬವರ ಪುತ್ರಿ ಶಿಲ್ಪಾ (28ವ.) ಆತ್ಮಹತ್ಯೆ ಮಾಡಿಕೊಂಡವರು. ಈಕೆ 4 ತಿಂಗಳ ಹಿಂದೆ ಮನೋಜ್ ಎಂಬಾತನೊಂದಿಗೆ ರಿಜಿಸ್ಟರ್ ಮದುವೆಯಾಗಿದ್ದು, ಮದುವೆಯ ನಂತರ ದಂಪತಿ ರಾಮಕುಂಜ ಗ್ರಾಮದಲ್ಲಿ ವಾಸ್ತವ್ಯವಿದ್ದರು. ಶಿಲ್ಪಾ ಅಲ್ಲಿಂದಲೇ ಕೆಲಸಕ್ಕೆ ಕಡಬಕ್ಕೆ ಬರುತ್ತಿದ್ದರು. ಜ.8ರಂದು ಸಂಜೆ ಶಿಲ್ಪಾ ತಂದೆಯ ಮನೆಯಲ್ಲಿ ವಿಷ ಸೇವಿಸಿ ಅಸ್ವಸ್ಥಗೊಂಡಿದ್ದು ಆಕೆಯನ್ನು ಚಿಕಿತ್ಸೆಗೆ ಕಡಬ ಸರಕಾರಿ ಆಸ್ಪತ್ರೆ, ಬಳಿಕ ವೆಸ್ಲಾಕ್ ಹಾಗೂ ನಂತರ ಎನೆಪೋಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಜ.9ರಂದು ಮಧ್ಯಾಹ್ನ ಶಿಲ್ಪಾ ಮೃತಪಟ್ಟಿರುವುದಾಗಿ ವರದಿಯಾಗಿದೆ. ಈ ಬಗ್ಗೆ ಶಿಲ್ಪಾ ಅವರ ತಂದೆ ಶಿವಪ್ರಸಾದ್ ಅವರು ನೀಡಿದ ದೂರಿನಂತೆ ಕಡಬ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Share with

Leave a Reply

Your email address will not be published. Required fields are marked *