ಪುತ್ತೂರು: ಅಭಿರಾಮ್ ಫ್ರೆಂಡ್ಸ್ (ರಿ.) ಪುತ್ತೂರು ಇದರ ವತಿಯಿಂದ ಹಿರಿಯ ಪ್ರಾ. ಶಾಲೆ ಕೃಷ್ಣನಗರ ಹಾಗೂ ಕೇಪುಳು, ನೆಲ್ಲಿಕಟ್ಟೆ, ರೋಟರಿಪುರ, ಕೆಮ್ಮಾಯಿ ಗುಂಡಿಜಾಲು, ಬೀರ್ನಹಿತ್ಲು ಅಂಗನವಾಡಿಯ ಮಕ್ಕಳಿಗೆ ಸ್ವಾತಂತ್ರ್ಯ ದಿನಾಚರಣೆಯಂದು ಸಿಹಿತಿಂಡಿ ವಿತರಿಸಿದರು.
ಚಿಕ್ಕಮುಡ್ನೂರು ಹಿ.ಪ್ರಾ ಶಾಲೆಗೆ ಚಯರ್, ಟೇಬಲ್ ವಿತರಣೆ:
ಚಿಕ್ಕಮುಡ್ನೂರು ಹಿ.ಪ್ರಾ ಶಾಲೆಯ ಮಕ್ಕಳಿಗೆ ನಲಿ-ಕಲಿಗೆ ಬೇಕಾದಂತಹ ಮೂರು ಟೇಬಲ್ ಹಾಗೂ 15 ಚಯರ್ ಗಳನ್ನು ಅಭಿರಾಮ್ ಫ್ರೆಂಡ್ಸ್ (ರಿ.)ನ ಅಧ್ಯಕ್ಷರು ಮತ್ತು ಸದಸ್ಯರು ಶಾಲಾ ಮುಖ್ಯೋಪಾಧ್ಯಾಯಿನಿ ಪುಷ್ಪಲತಾರವರಿಗೆ ಹಸ್ತಾಂತರಿಸಿದರು. ಅಭಿರಾಮ್ ಫ್ರೆಂಡ್ಸ್ (ರಿ.)ನ ಅಧ್ಯಕ್ಷ ತೇಜಕುಮಾರ್ ಕೆಮ್ಮಾಯಿ, ಕಾರ್ಯದರ್ಶಿ ಸನತ್ ಸುವರ್ಣ, ಉಪಾಧ್ಯಕ್ಷರಾದ ಪ್ರಜೀತ್ ಮಂಜಲ್ಪಡ್ಪು, ಹರ್ಷಿತ್ ರಾಮ್ ಬಳ್ಳಾಲ್, ಖಜಾಂಜಿ ಜಯೇಶ್ ಹಾಗೂ ಸದಸ್ಯರಾದ ಶರತ್ ಕೇಪುಳು, ರಮೇಶ್ ಬಂಡಾಜೆ, ಭರತ್, ಚಿದಾನಂದ ಕೇಪುಳು, ರಾಜೇಶ್ ಜಿಡೆಕಲ್ಲು, ಕಾರ್ತಿಕ್ ಊರಮಾಲು, ಕಿಶೋರ್ ತಾರಿಗುಡ್ಡೆ, ಪ್ರದೀಪ್ ಕೇಪುಳು, ಅವಿನಾಶ್ ಶೆಟ್ಟಿ, ಅಭಿಷೇಕ್ ಶೆಟ್ಟಿ, ಕಾರ್ತಿಕ್ ಚಿಕ್ಕಪುತ್ತೂರು, ಶಾಲಾ ಎಸ್‌ಡಿಎಂಸಿ ಸದಸ್ಯರು, ಬನ್ನೂರು ಗ್ರಾ, ಪಂ ತಿಮ್ಮಪ್ಪ ಪೂಜಾರಿ, ರಾಘವೇಂದ್ರ ಅಂದ್ರಟ ಮಕ್ಕಳ ಪೋಷಕರು, ಊರುವರು ಉಪಸ್ಥಿತರಿದ್ದರು.