ಉಡುಪಿ: ದೇಶದ್ರೋಹಿ ಘೋಷಣೆ ಕೂಗಿದವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ

Share with

ಉಡುಪಿ: ರಾಷ್ಟ್ರ ವಿರೋಧಿ ಹೇಳಿಕೆ ನೀಡಿದ ನಾಸಿರ್ ಹುಸೇನ್ ಅನುಯಾಯಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಉಡುಪಿ ನಗರ ವತಿಯಿಂದ ಅಜ್ಜರಕಾಡು ಯುದ್ಧ ಸ್ಮಾರಕದ ಬಳಿ ಪ್ರತಿಭಟನೆ ನಡೆಸಲಾಯಿತು.

ದೇಶದ್ರೋಹಿ ಘೋಷಣೆ ಕೂಗಿದವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ

ಉಡುಪಿ ತಾಲೂಕು ಸಂಚಾಲಕರಾದ ಅಜಿತ್ ಜೋಗಿ ಮಾತನಾಡಿ, ಪಾಪಿ ಪಾಕಿಸ್ತಾನ ಪರ ಘೋಷಣೆ ಕೂಗಿದ ದೇಶ ದ್ರೋಹಿಗಳು ಪಾಕಿಸ್ತಾನಕ್ಕೆ ಹೋಗಲಿ. ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ನಗರ ಕಾರ್ಯದರ್ಶಿ ಶ್ರೀವತ್ಸ ಮಾತನಾಡಿ, ದೇಶದ್ರೋಹಿ ಹೇಳಿಕೆ ನೀಡಿದ ಬೆಂಬಲಿಗರನ್ನು ಪೋಷಿಸುತ್ತಿರುವ ನಾಸಿರ್ ಹುಸೇನ್ ರಾಜ್ಯಸಭೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿದಂತೆ ತಡೆಹಿಡಿಯಬೇಕೆಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಜಿಲ್ಲಾ ಸಂಚಾಲಕರಾದ ಗಣೇಶ್ ಪೂಜಾರಿ, ನಗರ ಸಹಕಾರ್ಯದರ್ಶಿ ಕಾರ್ತಿಕ್ ಮತ್ತು ಭಾವನಾ, ನಗರ ವಿದ್ಯಾರ್ಥಿನಿ ಪ್ರಮುಖ್ ಸಂಹಿತಾ ಕೆ, ನಗರ ಹೋರಾಟ ಪ್ರಮುಖ್ ಭೂಷಣ್ ಮತ್ತು ಪ್ರಮುಖರಾದ ಕಿಶೋರ್, ಸುಚಿತಾ, ನವೀನ್, ಸ್ವಸ್ತಿಕ್, ಪ್ರಶ್ಮಾ, ಮನೀಶ್ ಭಾಗವಹಿಸಿದರು.


Share with

Leave a Reply

Your email address will not be published. Required fields are marked *