ಮಲ್ಪೆ: ಬಸ್ ಮತ್ತು ಸ್ಕೂಟರ್ ನಡುವೆ ಭೀಕರ ಅಪಘಾತ; ಓರ್ವ ಮೃತ್ಯು, ಇನ್ನೋರ್ವ ಗಂಭೀರ

Share with

ಉಡುಪಿ: ದ್ವಿಚಕ್ರ ವಾಹನವೊಂದು ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಯುವಕನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಮಲ್ಪೆ ರಸ್ತೆಯ ಪಂದುಬೆಟ್ಟು ಜ.26ರಂದು ರಾತ್ರಿ ನಡೆದಿದೆ.

ಬಸ್ ಮತ್ತು ಸ್ಕೂಟರ್ ನಡುವೆ ಭೀಕರ ಅಪಘಾತ

ಮೃತ ಸವಾರನನ್ನು ಮೋಕಿಮ್ ಅನ್ಸಾರಿ ಎಂದು ಗುರುತಿಸಲಾಗಿದೆ. ಸಹಸವಾರ ಮುಶರಫ್ ಎಂಬವರು ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಇಬ್ಬರು ಮಣಿಪಾಲದ ರೆಸ್ಟೋರೆಂಟ್ ಒಂದರಲ್ಲಿ ಕೆಲಸ ಮಾಡುತ್ತಿದ್ದರು.

ದ್ವಿಚಕ್ರ ವಾಹನವೊಂದು ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಯುವಕನೊಬ್ಬ ಸ್ಥಳದಲ್ಲೇ ಮೃತ್ಯು

ಜ.26ರಂದು ರಾತ್ರಿ ಮೋಕಿಮ್ ಅವರು ಸ್ಕೂಟರ್ ನಲ್ಲಿ ಮುಶರಫ್ ಅವರನ್ನು ಸಹಸವಾರನನ್ನಾಗಿ ಕೂರಿಸಿಕೊಂಡು ಮಲ್ಪೆಯಿಂದ ಉಡುಪಿ ಕಡೆಗೆ ಬರುತ್ತಿದ್ದರು. ಈ ಸಂದರ್ಭದಲ್ಲಿ ಕರಾವಳಿ ಜಂಕ್ಷನ್ ನಿಂದ ಮಲ್ಪೆ ಕಡೆಗೆ ಹೋಗುತ್ತಿದ್ದ ಬಸ್ ಗೆ ಸ್ಕೂಟರ್ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಮೋಕಿಮ್ ಅನ್ಸಾರಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಸಹ ಸವಾರ ಮುಶರಫ್ ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.


Share with

Leave a Reply

Your email address will not be published. Required fields are marked *