ಖಾಸಗಿ ಬಸ್– ಕಾರಿನ ಮಧ್ಯೆ ಅಪಘಾತ: ಇಬ್ಬರಿಗೆ ಗಾಯ

Share with

ಶಿವಮೊಗ್ಗ : ಖಾಸಗಿ ಬಸ್ ಹಾಗೂ ಕಾರಿನ ನಡುವೆ ಅಪಘಾತವಾಗಿದ್ದು, ಇಬ್ಬರು ಗಾಯಗೊಂಡ ಘಟನೆ ಡಿ.27ರ ಶನಿವಾರ ರಾತ್ರಿ ಕಾಸ್ಪಾಡಿ ಬಳಿ ನಡೆದಿದೆ.

ಮಣಿಪಾಲದಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಮತ್ತು ಸಾಗರದಿಂದ ಆನಂದಪುರ ಕಡೆ ತೆರಳುತ್ತಿದ್ದ ಕಾರು ಕಾಲ್ಪಾಡಿ ಬಳಿ ಪರಸ್ಪರ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ತೀವ್ರವಾಗಿ ಗಾಯಗೊಂಡಿದ್ದು, ಸಾಗರ ಆಸ್ಪತ್ರೆಗೆ ದಾಖಲಿಸಲಾಗಿದೆ.

ಎರಡು ವಾಹನಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.


Share with

Leave a Reply

Your email address will not be published. Required fields are marked *