KSRTC- ಖಾಸಗಿ ಬಸ್ ನಡುವೆ ಅಪಘಾತ

Share with

ರಾಯಚೂರಲ್ಲಿ ಖಾಸಗಿ ಬಸ್- KSRTC ಬಸ್ ನಡುವೆ ಅಪಘಾತ ಸಂಭವಿಸಿದ್ದು, ಖಾಸಗಿ ಬಸ್ ಚಾಲಕ ಪುಂಡಲೀಕ (30) ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ರಾಯಚೂರಿನ ಮಸ್ಕಿ ತಾಲೂಕಿನ ಹರಾಪೂರ ಗ್ರಾಮದ ಬಳಿ ಘಟನೆ ನಡೆದಿದೆ. ಅಪಘಾತದ ದೃಶ್ಯ ಸ್ಥಳೀಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ವೇಗವಾಗಿ ಬಂದ ಖಾಸಗಿ ಬಸ್, ಕೆಎಸ್‌ಆರ್‌ಟಿಸಿ ಬಸ್‌ ಹಿಂಬದಿಗೆ ಗುದ್ದಿದೆ. ಗುದ್ದಿದ ರಭಸಕ್ಕೆ ಖಾಸಗಿ ಬಸ್‌ನ ಮುಂಭಾಗ ಜಖಂ ಆಗಿದೆ. ಘಟನೆಯಲ್ಲಿ ಚಾಲಕ ಮೃತಪಟ್ಟರೆ, 9 ಜನ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾಗಿದೆ.


Share with