ಮಂಗಳೂರು: ನಗರದ ಹೊಯ್ಗೆ ಬಜಾರ್‌ನಲ್ಲಿರುವ ಹಂಚಿನ ಫ್ಯಾಕ್ಟರಿಯೊಂದರಲ್ಲಿ ಮಂಗಳವಾರ(ಜ.20) ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ.

ಮುಂಜಾನೆ ಹೊತ್ತಿಗೆ ಕಾಣಿಸಿಕೊಂಡ ಬೆಂಕಿ ಕ್ಷಣಾರ್ಧದಲ್ಲಿ ಕಾರ್ಖಾನೆಯಾದ್ಯಂತ ವ್ಯಾಪಿಸಿದೆ. ತಕ್ಷಣವೇ ಕಾರ್ಯಪ್ರವೃತ್ತರಾದ ಪಾಂಡೇಶ್ವರ ಮತ್ತು ಕದ್ರಿ ಅಗ್ನಿಶಾಮಕ ಠಾಣೆಯ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸುತ್ತಿದ್ದಾರೆ. ದಟ್ಟವಾದ ಹೊಗೆಯ ನಡುವೆಯೂ ಸಿಬ್ಬಂದಿಗಳು ಹರಸಾಹಸ ಪಟ್ಟು ಬೆಂಕಿಯನ್ನು ನಿಯಂತ್ರಣಕ್ಕೆ ತರಲು ಪ್ರಯತ್ನಿಸುತ್ತಿದ್ದಾರೆ.
ಕಾರ್ಖಾನೆಯ ಆವರಣದಲ್ಲಿ ಹಂಚು ಸುಡಲು ಸಂಗ್ರಹಿಸಿಟ್ಟಿದ್ದ ಕಟ್ಟಿಗೆ ಮತ್ತು ಇತರ ವಸ್ತುಗಳಿದ್ದ ಕಾರಣ ಬೆಂಕಿಯ ತೀವ್ರತೆ ಹೆಚ್ಚಾಗಿದೆ. ಬೆಂಕಿಯ ಜ್ವಾಲೆಗಳು ಆಕಾಶಕ್ಕೆ ಮುಟ್ಟುತ್ತಿದೆ.
ಪ್ರಾಣಾಪಾಯ ಸಂಭವಿಸಿದ ಬಗ್ಗೆ ಇದುವರೆಗೆ ವರದಿಯಾಗಿಲ್ಲ.




