ಬಂಟ್ವಾಳ: ಎಲಿಯನಡುಗೋಡು ಗ್ರಾಮದ ಉಪ್ಪಿರ ನಿವಾಸಿ ಮೋನಮ್ಮ ಎಂಬವರ ಮನೆಗೆ ಬೆಂಕಿ ತಗುಲಿದ್ದು ಮನೆ ಸಂಪೂರ್ಣ ಭಸ್ಮವಾಗಿದ್ದು ಘಟನಾ ಸ್ಥಳಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭೇಟಿ ನೀಡಿ ಸಂತ್ರಸ್ತ ಕುಟುಂಬಕ್ಕೆ ಧೈರ್ಯ ತುಂಬಿದರು.
ಈ ಸಂದರ್ಭದಲ್ಲಿ ಕುಕ್ಕಿಪ್ಪಾಡಿ ಪಂಚಾಯತ್ ಅಧ್ಯಕ್ಷರಾದ ಶೇಖರ್ ಶೆಟ್ಟಿ ಬದ್ಯಾರ್, ಪಂಚಾಯತ್ ಸದಸ್ಯರಾದ ಗೀತಾ, ಶೋಭಾ, ಬಿಜೆಪಿ ಬೂತ್ ಅಧ್ಯಕ್ಷರಾದ ಅಮ್ಮು ನಡ್ಯೋಡಿ, ಪುರುಷೋತ್ತಮ ಶೆಟ್ಟಿ ವಾಮದಪದವು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.