ಮಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿವಿಧ ಯೋಜನೆಗಳಿಗೆ ಮೀಸಲಿಟ್ಟ ಅನುದಾನವನ್ನು ಕಾಂಗ್ರೆಸ್ ಸರಕಾರ ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಂಡು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅನ್ಯಾಯವೆಸಗುತ್ತಿದೆ ಎಂದು ಆರೋಪಿಸಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಎಸ್.ಸಿ ಮತ್ತು ಎಸ್.ಟಿ ಮೋರ್ಚಾ ವತಿಯಿಂದ ಫೆ.26ರಂದು ಮಂಗಳೂರು ನಗರದ ಮಿನಿ ವಿಧಾನಸೌಧದ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು.
ಈ ಸಂದರ್ಭದಲ್ಲಿ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷರಾದ ಸತೀಶ್ ಕುಂಪಲ, ಮನಪಾ ಉಪಮೇಯರ್ ಸುನಿತಾ, ಎಸ್ ಸಿ ಮೋರ್ಚಾ ಜಿಲ್ಲಾಧ್ಯಕ್ಷ ಜಗನ್ನಾಥ ಬೆಳುವಾಯಿ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಿಶೋರ್ ಬೊಟ್ಯಾಡಿ, ಪ್ರಮುಖರಾದ ವಿಕಾಸ್ ಪುತ್ತೂರು, ಮಂಜುಳಾ ರಾವ್, ನಿತಿನ್ ಕುಮಾರ್, ಪೂಜಾ ಪೈ, ಎಸ್ ಸಿ ಮೋರ್ಚಾ ಮಾಜಿ ಜಿಲ್ಲಾಧ್ಯಕ್ಷ ವಿನಯ ನೇತ್ರ ದಡ್ಡಲಕಾಡು, ಯುವ ಮೋರ್ಚಾದ ಜಿಲ್ಲಾಧ್ಯಕ್ಷ ನಂದನ್ ಮಲ್ಯ ಮೊದಲಾದವರು ಪಾಲ್ಗೊಂಡಿದ್ದರು.