ಬಂಟ್ವಾಳ: 20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ನಕಲಿ ನೋಟು ಪ್ರಕರಣದ ಆರೋಪಿಯನ್ನು ಬಂಟ್ವಾಳ ನಗರ ಠಾಣಾ ಪೊಲೀಸರು ಬಂಧಿಸಿ ನ್ಯಾಯಲಾಯಕ್ಕೆ ಹಾಜರುಪಡಿಸಿದ್ದಾರೆ.
ನೆಲ್ಯಾಡಿಯ ಕೌಕ್ರಾಡಿ ಗ್ರಾಮದ ಮಣ್ಣಗುಂಡಿ ನಿವಾಸಿ ಇಬ್ರಾಹಿಂ ಬಂಧಿತ ಆರೋಪಿಯಾಗಿದ್ದು, ಆತನನ್ನು ನ್ಯಾಯಲಾಯವು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ನಕಲಿ ನೋಟು ಪ್ರಕರಣಕ್ಕೆ ಸಂಬಂಧಿಸಿದಂತೆ 2004ರಲ್ಲಿ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿತ್ತು. ಒಬ್ಬ ಆರೋಪಿ ತಕ್ಷಣ ಶರಣಾಗಿದ್ದು, ಇನ್ನೊಬ್ಬ ಆರೋಪಿ ಇಬ್ರಾಹಿಂ ತಲೆಮರೆಸಿಕೊಂಡಿದ್ದನು.
ಬಂಟ್ವಾಳ ನಗರ ಠಾಣೆಯ ಎಸ್.ಐ ಅನಂತ ಪದ್ಮನಾಭ ಹಾಗೂ ಪಿ.ಎಸ್.ಐ ರಾಮಕೃಷ್ಣ ಅವರ ಮಾರ್ಗದರ್ಶನದಲ್ಲಿ ಸಿಬ್ಬಂದಿಗಳಾದ ಗಣೇಶ್ ಮತ್ತು ಗೋಪಾಲಕೃಷ್ಣ ಅವರು ಆರೋಪಿಯನ್ನು ನೆಲ್ಯಾಡಿಯಲ್ಲಿ ಬಂಧಿಸಿದ್ದಾರೆ.