ಬೆಳ್ತಂಗಡಿ: ಅಕ್ರಮ ದನ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ನ್ಯಾಯಾಲಯದಿಂದ ಜಾಮೀನು ಪಡೆದುಕೊಂಡ ಬಳಿಕ ನ್ಯಾಯಲಾಯಕ್ಕೆ ಹಾಜರಾಗದೆ 8 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ.


ಹಾಸನ ಜಿಲ್ಲೆಯ ಹೊಳೆನರಸೀಪುರ ನಿವಾಸಿ ವಾಜಿದ್ ಪಾಷಾ(54) ಬಂಧಿತ ಆರೋಪಿಯಾಗಿದ್ದಾನೆ. ಆರೋಪಿಯು ಅಕ್ರಮ ಗೋ ಸಾಗಾಟ ಪ್ರಕರಣದಲ್ಲಿ ಬಂಧಿತನಾದ ಬಳಿಕ ಜಾಮೀನು ಪಡೆದು ಬಳಿಕ ವಿಚಾರಣೆಗೆ ಹಾಜರಾಗದೆ ಕಳೆದ ಎಂಟು ವರ್ಷಗಳಿಂದ ತಲೆಮರೆಸಿಕೊಂಡಿದ್ದ. ಈತನನ್ನು ಪೊಲೀಸರು ಹಾಸನದ ಹೊಳೆನರಸೀಪುರದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಪೊಲೀಸರು ಬಂಧಿತ ಆರೋಪಿಯನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.




