ಬಂಟ್ವಾಳ: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ 9 ವರ್ಷ ಹಿಂದಿನ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಮಂಗಳೂರು ಮಂಜನಾಡಿ ಗ್ರಾಮದ ನಾಟೆಕಲ್ ನಿವಾಸಿ ಅಶ್ರಫ್ ಬಂಧಿತ ಆರೋಪಿಯಾಗಿದ್ದು, 2015ರಲ್ಲಿ ಗಾಂಜಾ ಮಾರಾಟ ಮಾಡಿದ್ದ ಆರೋಪದ ಮೇಲೆ ಬಂಧನವಾಗಿ, ನಂತರ ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆಯಾದ ಆರೋಪಿಯು ಅ ಬಳಿಕ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.
ಈಗ ಖಚಿತ ಮಾಹಿತಿ ಪಡೆದ ಬಂಟ್ವಾಳ ಗ್ರಾಮಾಂತರ ಪೋಲಿಸ್ ಇನ್ಸ್ ಪೆಕ್ಟರ್ ಶಿವಕುಮಾರ್ ಅವರ ನೇತ್ರತ್ವದ ತಂಡ ಎಸ್.ಐ.ಹರೀಶ್ ಮತ್ತು ಮೂರ್ತಿ ಎಂ.ಅರ್ ಅವರ ಮಾರ್ಗದರ್ಶನದಲ್ಲಿ ಸಿಬ್ಬಂದಿಗಳಾದ ಗಣೇಶ್ ಪ್ರಸಾದ್, ಯೋಗೇಶ್ ಮತ್ತು ವಿಜಯಕುಮಾರ್ ಅವರು ದೇರಳಕಟ್ಟೆಯ ಕುತ್ತಾರು ಎಂಬಲ್ಲಿ ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದು ಬಳಿಕ ಈತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ ಎಂದು ತಿಳಿದು ಬಂದಿದೆ.