ಇರಾನ್-ಇಸ್ರೇಲ್ ನಡುವಿನ ಯುದ್ಧದ ಪರಿಣಾಮ ಅನಿಲ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುತ್ತಿದೆ. ಹೀಗಾಗಿ LPG ಸಿಲಿಂಡರ್ಗಳ ಅಕ್ರಮ ಸಂಗ್ರಹ ಮಾಡುವುದು, ಕಾಳಸಂತೆಯಲ್ಲಿ ಮಾರಾಟ ಮಾಡುವುದು ಹೆಚ್ಚುತ್ತಿದೆ. ಆದರೆ ಈ ರೀತಿ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ರಾಜ್ಯ ಸರ್ಕಾರ ಎಚ್ಚರಿಕೆ ನೀಡಿದೆ.

ಪಶ್ಚಿಮ ಏಷ್ಯಾ ಸಂಘರ್ಷಕ್ಕೆ ಸಂಬಂಧಿಸಿದ ಅಡೆತಡೆಗಳ ಹೊರತಾಗಿಯೂ ದೇಶೀಯ LPG ಪೂರೈಕೆ ಸಮರ್ಪಕವಾಗಿ ಉಳಿದಿದೆ ಎಂದು ಸರ್ಕಾರ ಭರವಸೆ ನೀಡಿದ್ದು, ಗ್ರಾಹಕರು ಆತಂಕಗೊಳ್ಳದಂತೆ ಮನವಿ ಮಾಡಿದೆ




