ನಟ ಬ್ಯಾಂಕ್ ಜನಾರ್ಧನ್ ಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

Share with

ಪೋಷಕ ನಟ ಬ್ಯಾಂಕ್ ಜನಾರ್ಧನ್ ಅವರಿಗೆ ಹೃದಯಾಘಾತವಾಗಿದ್ದು, ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಂಗಳೂರು: ಕನ್ನಡದ ಸಿನೆಮಾ ರಂಗದ ಖ್ಯಾತ ಪೋಷಕ ನಟ ಬ್ಯಾಂಕ್ ಜನಾರ್ಧನ್ ಅವರಿಗೆ ಹೃದಯಾಘಾತವಾಗಿದ್ದು, ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಬ್ಯಾಂಕ್ ಜನಾರ್ದನ್ ಅವರು ಕನ್ನಡ ಚಲನಚಿತ್ರಗಳು ಮತ್ತು ಟಿವಿ ಸೀರಿಯಲ್​ನಲ್ಲಿ ಹಾಸ್ಯ ನಟನಾಗಿ ನಟಿಸಿ ಜನಪ್ರಿಯರಾಗಿದ್ದಾರೆ.

ತಂದೆಯ ಆರೋಗ್ಯದ ಕುರಿತು ಮಾಹಿತಿ ನೀಡಿರುವ ಬ್ಯಾಂಕ್ ಜನಾರ್ದನ್ ಪುತ್ರ ಗುರುಪ್ರಸಾದ್ ಅವರು ಹೆದರುವ ಅಗತ್ಯವಿಲ್ಲ ಎಂದಿದ್ದಾರೆ. ಬ್ಯಾಂಕ್ ಜನಾರ್ದನ್ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವರು ಆರೋಗ್ಯವಾಗಿದ್ದಾರೆ. ಸದ್ಯ ಅವರಿಗೆ ಆಂಜಿಯೋಗ್ರಾಮ್ ಮಾಡಲಾಗುತ್ತಿದೆ ಎಂದಿದ್ದಾರೆ


Share with

Leave a Reply

Your email address will not be published. Required fields are marked *