ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ಗೆ ಮತ್ತೆ ಬಂಧನ ಭೀತಿ ಎದುರಾಗಿದೆ. ಹೈಕೋರ್ಟ್ ಜಾಮೀನು ಪ್ರಶ್ನಿಸಿ ಸರ್ಕಾರ ಸಲ್ಲಿಸಿರುವ ಮೇಲ್ಮನವಿ ಅರ್ಜಿ ವಿಚಾರಣೆ ವೇಳೆ ಸುಪ್ರೀಂಕೋರ್ಟ್ ಜಾಮೀನು ಬಿಡುಗಡೆ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದೆ.

ಜುಲೈ 22ರಂದು ತೀರ್ಪು ಹೊರಬೀಳುವ ಸಾಧ್ಯತೆ ಇದೆ. ದರ್ಶನ್ ಜಾಮೀನು ರದ್ದಾದರೆ ಮತ್ತೆ ಜೈಲೆ ಗತಿ. ಸದ್ಯ ಥಾಯ್ಲೆಂಡ್ನಲ್ಲಿ ದರ್ಶನ್ ಶೂಟಿಂಗ್ನಲ್ಲಿ ನಿರತರಾಗಿದ್ದಾರೆ. ದರ್ಶನ್ ವಿದೇಶ ಪ್ರವಾಸಕ್ಕೆ ಕೋರ್ಟ್ ಷರತ್ತುಬದ್ಧ ಅನುಮತಿ ನೀಡಿದೆ.




