ಬೆಂಗಳೂರು: ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಸೇರಿದಂತೆ ಇಬ್ಬರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಕರ್ನಾಟಕ ಸರ್ಕಾರವು ಆದೇಶವನ್ನು ಹೊರಡಿಸಿದೆ.
ಅಲೋಕ್ ಕುಮಾರ್ ಅವರನ್ನು ತರಬೇತಿ ಕೇಂದ್ರಕ್ಕೆ ವರ್ಗಾವಣೆ ಮಾಡಲಾಗಿದ್ದು, ಕರ್ನಾಟಕ ಹೌಸಿಂಗ್ ಸೊಸೈಟಿಯ ಎಂ.ಡಿ ಆಗಿ ಕಾರ್ಯ ನಿರ್ವಹಿಸುತ್ತಿದ್ದ ರಾಮಚಂದ್ರ ರಾವ್ ಅವರಿಗೆ ಮುಂಬಡ್ತಿ ಭಾಗ್ಯ ನೀಡಿದೆ. ರಾವ್ ಅವರನ್ನು ಡಿಜಿಪಿಯಾಗಿ ಮುಂಬಡ್ತಿ ನೀಡಿ ವರ್ಗಾವಣೆ ಮಾಡಲಾಗಿದೆ. ಅಲೋಕ್ ಕುಮಾರ್ ಅವರನ್ನು ಮೂರು ತಿಂಗಳ ಹಿಂದೆಯಷ್ಟೇ ಕಾನೂನು ಮತ್ತು ಸುವ್ಯವಸ್ಥೆಯಿಂದ ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗದ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿತ್ತು. ಇದೀಗ ಮತ್ತೆ ವರ್ಗಾವಣೆ ಮಾಡಲಾಗಿದೆ.