ಇಡ್ಲಿ, ಗೋಬಿ ಸೇರಿದಂತೆ ಅನೇಕ ಆಹಾರಗಳಲ್ಲಿ ಆರೋಗ್ಯಕ್ಕೆ ಹಾನಿಕಾರಕ ಅಂಶ ಪತ್ತೆಯಾದ ಬೆನ್ನಲ್ಲೇಸಿಹಿ ತಿಂಡಿಗಳಿಗೆ ಬಳಸುವ ಕೋವಾದಲ್ಲಿ ಕೂಡ ಕಲಬೆರಕೆ ಪತ್ತೆಯಾಗಿರುವುದಾಗಿ ಆಹಾರ ಇಲಾಖೆಯ ಪರೀಕ್ಷೆಯ ವರದಿ ತಿಳಿಸಿದೆ.

ಆಹಾರಗಳ ತಯಾರಿ ಹಾಗೂ ಮಾರಾಟ ಸಂಬಂಧ ಕೆಲವೊಂದು ಕಠಿಣ ನಿಯಮಗಳನ್ನು ಜಾರಿ ಮಾಡಿತ್ತು. ಆ ನಂತರ ಕುಡಿಯುವ ನೀರು ಸುರಕ್ಷಿತವೇ ಎಂಬ ಬಗ್ಗೆ ಪರಿಶೀಲನೆಗೆ ಮುಂದಾಗಿತ್ತು. ಇದೀಗ ಪರೀಕ್ಷಾ ವರದಿ ಬಂದಿದ್ದು, ಆಘಾತಕಾರಿ ವಿಚಾರ ಬಯಲಾಗಿದೆ. ಈ ಬಗ್ಗೆ ಸರ್ಕಾರ ಇನ್ನೇನು ಕ್ರಮ ಕೈಗೊಳ್ಳಲಿದೆ ಎಂಬುದನ್ನು ಕಾದುನೋಡಬೇಕಿದೆ.




