
ಹಾಸನ,ಜ.31-ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ತಡೆದು ಲಾಂಗ್‌ನಿಂದ ಗಾಜು ಒಡೆದು ಅಟ್ಟಹಾಸ ಮೆರೆದಿದ್ದ ಪುಡಿರೌಡಿಯ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ಶಾಂತಿಗ್ರಾಮ ಬಳಿ ನಡೆದಿದೆ.

ಕೊಲೆ, ಕೊಲೆ ಯತ್ನ ಸೇರಿದಂತೆ ಹಲವು ಅಪರಾಧ ಪ್ರಕರಣಗಳಲ್ಲಿ ಆರೋಪಿಯಾಗಿರುವ ಮನೋಜ್.ಜಿ.ಗೌಡ ಅಲಿಯಾಸ್ ಮನುವನ್ನು (23)ಬೆಂಗಳೂರಿನಲ್ಲಿ ಬಂಧಿಸಲಾಗಿತ್ತು.
ಬೆಂಗಳೂರಿನಿಂದ ಕಳೆದ ರಾತ್ರಿ ಹಾಸನ ನಗರ ಠಾಣೆ ಪೊಲೀಸರು ಆರೋಪಿಯನ್ನು ಇಲ್ಲಿಗೆ ಕರೆ ತರುತ್ತಿದ್ದಾಗ ಮೂತ್ರ ವಿಸರ್ಜನೆಗೆ ಅನುಮತಿ ಕೇಳಿದ್ದಾನೆ. ಶಾಂತಿಗ್ರಾಮ ಬಳಿ ರಸ್ತೆ ಬದಿ ಜೀಪ್ ನಿಲ್ಲಿಸಿದಾಗ ಪರಾರಿಯಾಗಲು ಪೊಲೀಸರ ಮೇಲೆಯೇ ಕಲ್ಲಿನಿಂದ ಹಲ್ಲೆ ನಡೆಸಿ ಆರೋಪಿ ಮನು ಓಡಲು ಯತ್ನಿಸಿದ್ದಾನೆ.
ಈ ಸಂದರ್ಭದಲ್ಲಿ ಹಾಸನ ನಗರ ಠಾಣೆ ಇನ್ಸ್ ಪೆಕ್ಟರ್ ಮೋಹನ್‌ಕೃಷ್ಣ ಆತರಕ್ಷಣೆಗಾಗಿ ಆರೋಪಿ ಕಾಲಿಗೆ ಗುಂಡು ಹಾರಿಸಿದಾಗ ಆರೋಪಿ ಕಾಲಿಗೆ ಒಂದು ಗುಂಡು ತಾಗಿದೆ. ನಂತರ ಸಬ್‌ಇನ್‌್ಸಪೆಕ್ಟರ್ ಕುಮಾರ್ ಆರೋಪಿಯನ್ನು ವಶಕ್ಕೆ ಪಡೆದು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.




