ಮಂಗಳೂರು: ಮಂಗಳೂರಿನಿಂದ ಬೆಂಗಳೂರಿಗೆ ತೆರಳಬೇಕಿದ್ದ ವಿಮಾನ ಕಡೆಯ ಕ್ಷಣದಲ್ಲಿ ರದ್ದಾಗಿದ್ದು ಏರ್ ಇಂಡಿಯಾ ಸಿಬ್ಬಂದಿಯನ್ನು ಪ್ರಯಾಣಿಕರು ತರಾಟೆಗೆ ತೆಗೆದುಕೊಂಡ ಘಟನೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಡಿ.23ರಂದು ನಡೆದಿದೆ.
ರಾತ್ರಿ 8:15ಕ್ಕೆ ಮಂಗಳೂರು ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ಹಾರಬೇಕಿದ್ದ ಏರ್ ಇಂಡಿಯಾ ವಿಮಾನ ಕೊನೇ ಕ್ಷಣದಲ್ಲಿ ರದ್ದಾಗಿದ್ದು, ಇದರಿಂದ ಕೋಪಗೊಂಡ ಪ್ರಯಾಣಿಕರು ಆಕ್ರೋಶ ಹೊರ ಹಾಕಿದರು. ತಾಂತ್ರಿಕ ಅಡಚಣೆಯಿಂದಾಗಿ ವಿಮಾನಯಾನ ಕ್ಯಾನ್ಸಲ್ ಮಾಡಲಾಗಿತ್ತು. ಬಳಿಕ ಪರ್ಯಾಯ ವ್ಯವಸ್ಥೆ ಮಾಡಿ ರಾತ್ರಿ 2:15ಕ್ಕೆ ಬೇರೊಂದು ವಿಮಾನದ ಮೂಲಕ ಪ್ರಯಾಣಕ್ಕೆ ವ್ಯವಸ್ಥೆ ಮಾಡಲಾಯಿತು ಎಂದು ತಿಳಿದು ಬಂದಿದೆ.