ಬಂಟ್ವಾಳ : ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಬಂಟ್ವಾಳ ಇದರ ಸಭೆ ಶುಕ್ರವಾರ ಬಂಟ್ವಾಳದ ಶ್ರೀಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಉನ್ನತೀ ಸೌಧದಲ್ಲಿ ನಡೆಯಿತು. ಬಂಟ್ವಾಳ ತಾಲೂಕು ಜನಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷ ಕೆಯ್ಯೂರು ನಾರಾಯಣ ಭಟ್ ಕಾರ್ಯಕ್ರಮ ಉದ್ಘಾಟಿಸಿದರು.
ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷ ರೊನಾಲ್ಡ್ ಡಿ ಸೋಜಾ ಅಧ್ಯಕ್ಷತೆ ವಹಿಸಿದ್ದರು. ಯೋಜನೆಯ ದ.ಕ. ಜಿಲ್ಲಾ ನಿರ್ದೇಶಕ ಮಹಾಬಲ ಕುಲಾಲ್, ಕೇಂದ್ರ ಒಕ್ಕೂಟದ ಅಧ್ಯಕ್ಷ ಚಿದಾನಂದ ರೈ ಕಕ್ಯ, ಜನಜಾಗೃತಿ ಮಾಜಿ ಅಧ್ಯಕ್ಷ ಪ್ರಕಾಶ್ ಕಾರಂತ್ , ಜನಜಾಗೃತಿ ಯೋಜನಾಧಿಕಾರಿ ಗಣೇಶ್ ಆಚಾರ್ಯ, ಕ್ಷೇತ್ರ ಯೋಜನಾಧಿಕಾರಿಗಳಾದ ಬಾಲಕ್ರಷ್ಣ ಎಂ., ರಮೇಶ್ ವೇದಿಕೆಯಲ್ಲಿದ್ದರು. ಹಾಗೂ ಜನಜಾಗೃತಿ ವೇದಿಕೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು. ನಿತೇಶ್ ಕೆ. ಸ್ವಾಗತಿಸಿ, ತುಂಬೆ ವಲಯದ ಮೇಲ್ವಿಚಾರಕಿ ಮಮತಾ ಕಾರ್ಯಕ್ರಮ ನಿರೂಪಿಸಿದರು.