ದ.ಕ, ಉಡುಪಿ ಸೇರಿದಂತೆ ಹಲವು ಕಡೆ ಮುಂದಿನ ನಾಲ್ಕು ದಿನ ಮಳೆ..

Share with

ಮುಂದಿನ 4 ದಿನ ರಾಜ್ಯದ ವಿವಿಧ ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಜೋರು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಮುನ್ಸೂಚನೆ ತಿಳಿಸಿದೆ. ದಾವಣಗೆರೆಯಲ್ಲೂ ಸಹ ಗುಡುಗು,-ಬಿರುಗಾಳಿ ಸಹಿತ ಭಾರೀ ಮಳೆಯಾಗಲಿದೆ.

ಉತ್ತರ, ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಇನ್ನು, ಕಲಬುರಗಿ, ಹಾವೇರಿ, ಬಾಗಲಕೋಟೆ, ವಿಜಯಪುರ, ಕೊಪ್ಪಳ, ಗದಗ, ಧಾರವಾಡ, ಶಿವಮೊಗ್ಗ, ಚಿಕ್ಕಮಗಳೂರು, ಮಂಡ್ಯ, ದ. ಕನ್ನಡ, ಉಡುಪಿ, ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ.


Share with

Leave a Reply

Your email address will not be published. Required fields are marked *