ಒಲಿಂಪಿಕ್ಸ್​ನಲ್ಲಿ ಹೊಸ ಇತಿಹಾಸ ಬರೆದ ಅಮನ್ ಸೆಹ್ರಾವತ್

Share with

ಪ್ಯಾರಿಸ್ : ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ ಪದಕ ಗೆಲ್ಲುವ ಮೂಲಕ ಭಾರತದ ಯುವ ಕುಸ್ತಿಪಟು ಅಮನ್ ಸೆಹ್ರಾವತ್ (Aman Sehrawat) ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಕೂಡ ತಮ್ಮ 21ನೇ ವಯಸ್ಸಿನಲ್ಲಿ ಕಂಚಿನ ಪದಕಕ್ಕೆ ಕೊರೊಳೊಡ್ಡುವ ಮೂಲಕ ಎಂಬುದು ವಿಶೇಷ. ಶುಕ್ರವಾರ ಚಾಂಪ್ ಡಿ ಅರೆನಾದಲ್ಲಿ ನಡೆದ 57 ಕೆ.ಜಿ ಫ್ರೀ ಸ್ಟೈಲ್ ಕುಸ್ತಿ ಸ್ಪರ್ಧೆಯಲ್ಲಿ ಅಮನ್ ಸೆಹ್ರಾವತ್ ಹಾಗೂ ಪೋರ್ಟೊ ರಿಕೊದ ಡೇರಿಯನ್ ಟೊಯಿ ಕ್ರೂಜ್ ಮುಖಾಮುಖಿಯಾಗಿದ್ದರು. ಕಂಚಿನ ಪದಕ್ಕಾಗಿ ನಡೆದ ಈ ಪಂದ್ಯದಲ್ಲಿ ಜಿದ್ದಾಜಿದ್ದಿನ ಹೋರಾಟ ಕಂಡು ಬಂದರೂ ಅಂತಿಮವಾಗಿ 13-5 ಪಾಯಿಂಟ್ಸ್​ಗಳ ಅಂತರದಿಂದ ಗೆಲ್ಲುವಲ್ಲಿ ಅಮನ್ ಯಶಸ್ವಿಯಾದರು.

ಈ ಗೆಲುವಿನೊಂದಿಗೆ ಅಮನ್ ಸೆಹ್ರಾವತ್ ಕಂಚಿನ ಪದಕಕ್ಕೆ ಕೊರೊಳೊಡ್ಡಿದ್ದರು. ವಿಶೇಷ ಎಂದರೆ ಈ ಪದಕದೊಂದಿಗೆ ಒಲಿಂಪಿಕ್ಸ್ ಇತಿಹಾಸದಲ್ಲೇ ಭಾರತಕ್ಕೆ ಪದಕ ಗೆದ್ದುಕೊಟ್ಟ ಅತ್ಯಂತ ಕಿರಿಯ ಕ್ರೀಡಾಳು ಎಂಬ ದಾಖಲೆಯೊಂದು ಅಮನ್ ಹೆಸರಿಗೆ ಸೇರ್ಪಡೆಯಾಯಿತು. ಇದಕ್ಕೂ ಮುನ್ನ ಈ ದಾಖಲೆ ಬ್ಯಾಡ್ಮಿಂಟನ್ ತಾರೆ ಪಿ.ವಿ ಸಿಂಧು ಅವರ ಹೆಸರಿನಲ್ಲಿತ್ತು. 2016ರ ರಿಯೋ ಒಲಿಂಪಿಕ್ಸ್​ನಲ್ಲಿ 21 ವರ್ಷದ (1 ತಿಂಗಳು, 14 ದಿನಗಳು) ಸಿಂಧು ಬೆಳ್ಳಿ ಪದಕ ಗೆದ್ದು ಈ ದಾಖಲೆ ನಿರ್ಮಿಸಿದ್ದರು. ಇದೀಗ ಈ ದಾಖಲೆಯನ್ನು ಮುರಿಯುವಲ್ಲಿ ಯುವ ಕುಸ್ತಿ ಪಟು ಯಶಸ್ವಿಯಾಗಿದ್ದಾರೆ.


Share with

Leave a Reply

Your email address will not be published. Required fields are marked *