ಉಡುಪಿ: ಸ್ನಾನಗೃಹದಲ್ಲಿ ಸ್ನಾನ ಮಾಡುತ್ತಿದ್ದ ವೇಳೆ ಮಹಿಳೆಯೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಪುತ್ತೂರು ಅಂಬಾಗಿಲಿನ ಅಂಬೇಡ್ಕರ್ ಕಾಲೋನಿಯಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ಸಲ್ನಾಥ್ (51) ಎಂದು ಗುರುತಿಸಲಾಗಿದೆ. ಸಮಾಜಸೇವಕ ನಿತ್ಯಾನಂದ ಒಳಕಾಡುವರು ಮೃತದೇಹವನ್ನು ಸ್ಥಳೀಯರ ಸಹಕಾರದಿಂದ ಹೊರತಂದು, ಜಿಲ್ಲಾಸ್ಪತ್ರೆಯ ವೈದ್ಯಕೀಯ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ನೆರವಾದರು. ಉಡುಪಿ ನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.