ಅಂಬೇಡ್ಕರ್ ಜಯಂತಿ – ಏ. 14 ರಂದು ಸಾರ್ವತ್ರಿಕ ರಜೆ ಘೋಷಿಸಿದ ಕೇಂದ್ರ ಸರ್ಕಾರ

Share with

ದೇಶಾದ್ಯಂತ ಏ.14 ರಂದು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜನ್ಮ ಜಯಂತಿ ಪ್ರಯುಕ್ತ ಕೇಂದ್ರದ ಎಲ್ಲಾ ಸರ್ಕಾರಿ ಕಚೇರಿಗಳಿಗೆ ಸಾರ್ವತ್ರಿಕ ರಜೆ ಘೋಷಿಸಲಾಗಿದೆ.

ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮದಿನದ ಅಂಗವಾಗಿ ಭಾರತದಾದ್ಯಂತ ಕೈಗಾರಿಕಾ ಸಂಸ್ಥೆಗಳು ಸೇರಿದಂತೆ ಎಲ್ಲಾ ಕೇಂದ್ರ ಸರ್ಕಾರಿ ಕಚೇರಿಗಳಿಗೆ ಸೋಮವಾರ ಅಂದರೆ, ಏಪ್ರಿಲ್ 14 ರಂದು ರಜೆ ಘೋಷಿಸಲು ನಿರ್ಧರಿಸಲಾಗಿದೆ. ಭಾರತ ಸರ್ಕಾರದ ಎಲ್ಲಾ ಸಚಿವಾಲಯಗಳು/ಇಲಾಖೆಗಳು ಮೇಲಿನ ನಿರ್ಧಾರವನ್ನು ಸಂಬಂಧಪಟ್ಟ ಎಲ್ಲರ ಗಮನಕ್ಕೆ ತರಲು ಸೂಚನೆ ನೀಡಲಾಗಿದೆ.


Share with

Leave a Reply

Your email address will not be published. Required fields are marked *