ಮಂಗಳೂರು: ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಪಣಂಬೂರು ಬೀಚ್‌ನಲ್ಲಿ 90 ಲಕ್ಷ ಮೌಲ್ಯದ ಅಂಬರ್ ಗ್ರೀಸ್(ತಿಮಿಂಗಿಲ ವಾಂತಿ)ಯನ್ನು ವಶಪಡಿಸಿಕೊಂಡು ಮೂವರನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳು ಉಡುಪಿಯ ಸಾಲಿಗ್ರಾಮ ನಿವಾಸಿ ಜಯಕರ, ಶಿವಮೊಗ್ಗದ ಸಾಗರ ನಿವಾಸಿ ಆದಿತ್ಯ, ಹಾವೇರಿಯ ಶಿಗ್ಗಾಂ ಮೂಲದ ಲೋಹಿತ್ ಎಂದು ತಿಳಿದು ಬಂದಿದೆ. ಬಂಧಿತರಿಂದ ವಶಪಡಿಸಿಕೊಂಡ ಅಂಬರ್ ಗ್ರೀಸ್(ತಿಮಿಂಗಿಲ ವಾಂತಿ)ಯು ೯೦೦ ಗ್ರಾಂ.ನಷ್ಟಿದ್ದು, ಇದರ ಬೆಲೆ ಸರಿಸುಮಾರು 90 ಲಕ್ಷ ಎಂದು ಅಂದಾಜಿಸಲಾಗಿದೆ.
ಪಣಂಬೂರು ಬೀಚ್ ಬಳಿ ಮೂವರು ಅಂಬರ್ ಗ್ರೀಸ್ ಹೊಂದಿರುವ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಮಂಗಳೂರು ಸಿಸಿಬಿ ಪೊಲೀಸರು ಆರೋಪಿಗಳ ಸಹಿತ ಅಂಬರ್ ಗ್ರೀಸ್(ತಿಮಿಂಗಿಲ ವಾಂತಿ)ಯನ್ನು ವಶಪಡಿಸಿಕೊಂಡಿದ್ದಾರೆ.