ಮಂಗಳೂರು: ರೋಗಿಯನ್ನು ಕರೆದುಕೊಂಡು ಹೋಗುತ್ತಿದ್ದ ಆಂಬ್ಯುಲೆನ್ಸ್, ಆಟೋ ರಿಕ್ಷಾವೂಂದಕ್ಕೆ ಡಿಕ್ಕಿಯಾಗಿ ಆಟೋ ಚಾಲಕ ಹಾಗೂ ಮಗು ಗಾಯಗೊಂಡ ಘಟನೆ ಮಂಗಳೂರಿನ ಪಡೀಲ್ ನಲ್ಲಿ ನಡೆದಿದೆ.
ರಿಕ್ಷಾದಲ್ಲಿ ಮೂವರು ಪ್ರಯಾಣಿಸುತ್ತಿದ್ದು ಹಾಗೂ ಟೈಲ್ಸ್ ಸಾಗಿಸಲಾಗುತ್ತಿತ್ತು. ಅಪಘಾತದಿಂದ ಆಟೋ ರಿಕ್ಷಾ ಚಾಲಕ ಮತ್ತು ಮಗುವಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಆಂಬ್ಯುಲೆನ್ಸ್ ಹಿಂದಿನಿಂದ ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದಿದ್ದು ಅಪಘಾತದ ರಭಸಕ್ಕೆ ಆಟೋ ರಿಕ್ಷಾದಲ್ಲಿ ಸಾಗಿಸುತ್ತಿದ್ದ ಟೈಲ್ಸ್ ರಸ್ತೆಯ ಮೇಲೆ ಬಿದ್ದಿವೆ ಎಂದು ತಿಳಿದು ಬಂದಿದೆ.