ಬಂಟ್ವಾಳ: ರೋಗಿಯೊಬ್ಬರನ್ನು ಕೊಂಡುಹೋಗುತ್ತಿರುವ ವೇಳೆ ಅಂಬುಲೆನ್ಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಚಾಲಕ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ವಗ್ಗ ಬಳಿ ಆ. 18 ರಂದು ನಡೆದಿದೆ.
ಬೆಳ್ತಂಗಡಿಯಿಂದ ಮಂಗಳೂರಿಗೆ ರೋಗಿಯೊಬ್ಬರನ್ನು ಕೊಂಡೊಯ್ಯುತ್ತಿರುವ ವೇಳೆ ಬಂಟ್ವಾಳದ ವಗ್ಗ ಬಳಿ ಅಂಬುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ವೇಳೆ ಚಾಲಕ ಮಡಂತ್ಯಾರ್ ಮಾಲಾಡಿ ನಿವಾಸಿ ಶಬೀರ್ ಎಂಬವರು ಗಂಭೀರ ಗಾಯಗೊಂಡಿದ್ದು ತಕ್ಷಣ ಅವರನ್ನು ತುಂಬೆ ಖಾಸಗಿ ಆಸ್ಪತ್ರೆಗೆ ಕೊಂಡು ಹೋದರೂ ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.