ಅಜೆಕಾರು : ಬಾವಿಗೆ ಬಿದ್ದು ವೃದ್ಧೆ ಸಾವು

Share with

ಬಾವಿಗೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ವೃದ್ಧೆ ಸಾವನಪ್ಪಿದ ಘಟನೆ ಮಾ. 2ರಂದು ಕಾರ್ಕಳದ ಮರ್ಣೆ ಗ್ರಾಮದಲ್ಲಿ ಸಂಭವಿಸಿದೆ.

ಚಿಂದು (88) ಮೃತ ದುರ್ದೈವಿ. ಇವರು ಮನೆಯ ಪಕ್ಕದಲ್ಲಿರುವ ತನ್ನ ಅಕ್ಕನ ಮನೆಗೆ ಹೋಗಿ ಬರುತ್ತೇನೆ ಎಂದು ಹೋದವರು ವಾಪಾಸ್ಸು ಮನೆಗೆ ಬಂದಿರುವುದಿಲ್ಲ. ಹುಡುಕಾಡಿದಾಗ ಮನೆಯ ಹತ್ತಿರದ ಬಾವಿಗೆ ಬಿದ್ದು ಮೃತಪಟ್ಟಿರುವುದು ಗಮನಕ್ಕೆ ಬಂದಿರುತ್ತದೆ.

ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಮೃತಪಟ್ಟಿದ್ದಾರೆ ಎಂದು ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ


Share with