ಕಾಸರಗೋಡು: ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಅನಂತಪುರ ಶ್ರೀ ಅನಂತಪದ್ಮನಾಭ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯವು ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಇದೀಗ ಬ್ರಹ್ಮಕಲಶೋತ್ಸವದ ಪವಿತ್ರ ಕ್ಷಣಗಳಿಗೆ ಸಜ್ಜಾಗುತ್ತಿದೆ.
ಈ ಮಹತ್ವದ ಕಾರ್ಯಕ್ರಮದ ಪೂರ್ವಭಾವಿಯಾಗಿ, ಇದೇ ಬರುವ ಜೂನ್ 28ರಂದು ಬೆಳಿಗ್ಗೆ 10 ಗಂಟೆಗೆ ದೇವಸ್ಥಾನದಲ್ಲಿ ಭಕ್ತರ ಸಭೆಯನ್ನು ಆಯೋಜಿಸಲಾಗಿದೆ.
ಎಡನೀರು ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ, ಮಾಣಿಲ ಶ್ರೀ ನಿರ್ಮಲಾನಂದ ಸ್ವಾಮೀಜಿ ಹಾಗೂ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿಗಳ ದಿವ್ಯ ಸಾನ್ನಿಧ್ಯ ಮತ್ತು ಮಾರ್ಗದರ್ಶನದಲ್ಲಿ ಈ ಸಭೆ ನಡೆಯಲಿದ್ದು, ಬ್ರಹ್ಮಕಲಶೋತ್ಸವದ ಸಿದ್ಧತೆಗಳು, ಸೇವಾ ಕಾರ್ಯಗಳು ಹಾಗೂ ಭಕ್ತರ ಸಹಭಾಗಿತ್ವದ ಕುರಿತು ಮಹತ್ವದ ಚರ್ಚೆಗಳು ಈ ಸಭೆಯಲ್ಲಿ ನಡೆಯಲಿವೆ.
ಆದ್ದರಿಂದ ಸಮಸ್ತ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಈ ಪುಣ್ಯ ಕಾರ್ಯದಲ್ಲಿ ಕೈಜೋಡಿಸಬೇಕೆಂದು ದೇವಸ್ಥಾನದ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.





